ನವೆಂಬರ್ ನಲ್ಲಿ ಗ್ರಾ.ಪಂ. ಚುನಾವಣೆಗೆ ಸಿದ್ಧ | ಹೈಕೋರ್ಟ್ ಗೆ ಆಯೋಗದ ಮಾಹಿತಿ

Prasthutha|

ಬೆಂಗಳೂರು : ನವೆಂಬರ್ ನಲ್ಲೇ ಗ್ರಾಮ ಪಂಚಾಯತಿ ಚುನಾವಣೆ ನಡೆಸಲು ಎಲ್ಲಾ ಸಿದ್ಧತೆಗಳನ್ನು ನಡೆಸಿಕೊಳ್ಳಲಾಗಿದೆ ಎಂದು ರಾಜ್ಯ ಚುನಾವಣಾ ಆಯೋಗ ಹೈಕೋರ್ಟ್ ಗೆ ತಿಳಿಸಿದೆ.

ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್ ನೇತೃತ್ವದ ವಿಭಾಗೀಯ ಪೀಠಕ್ಕೆ ಚುನಾವಣಾ ಆಯೋಗದ ಪರ ಹಿರಿಯ ನ್ಯಾಯವಾದಿ ಕೆ.ಎನ್. ಫಣೀಂದ್ರ ಈ ಮಾಹಿತಿ ನೀಡಿದರು. ಚುನಾವಣೆ ನಡೆಸುವ ಸಲುವಾಗಿ ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ಮಾತುಕತೆ ನಡೆದಿದೆ. ಚುನಾವಣೆ ನಡೆಸಬಹುದು ಎಂಬ ನಿಲುವು ಬಹುತೇಕ ಜಿಲ್ಲಾಧಿಕಾರಿಗಳು ವ್ಯಕ್ತಪಡಿಸಿದ್ದಾರೆ ಎಂದು ಅವರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

- Advertisement -

ಕೊರೋನಾ ಸೋಂಕು ಕಡಿಮೆ ಇರುವಲ್ಲಿ ಚುನಾವಣೆ ನಡೆಸಬಹುದಲ್ಲವೇ? ವಿವಿಧ ಹಂತಗಳಲ್ಲಿ ಚುನಾವಣೆ ನಡೆಸುವ ಕುರಿತು ಯೋಚಿಸಬಹುದಲ್ಲವೇ? ಎಂದು ನ್ಯಾಯಾಲಯ ಪ್ರಶ್ನಿಸಿತು. ಒಂದು ತಾಲೂಕಿನಲ್ಲಿ ಎರಡು ಹಂತದ ಚುನಾವಣೆ ನಡೆಸುವ ಕುರಿತು ಚಿಂತಿಸಲಾಗಿದೆ ಎಂದು ಅವರು ಉತ್ತರಿಸಿದರು. ವಿಚಾರಣೆ ಶುಕ್ರವಾರಕ್ಕೆ ಮುಂದೂಡಲಾಗಿದೆ.

- Advertisement -