ಪಂಪ್‌ವೆಲ್ ಮಸ್ಜಿದ್‌ಗೆ ಹಾನಿ: ಶೀಘ್ರ ಕ್ರಮಕ್ಕೆ ಪಾಪ್ಯುಲರ್ ಫ್ರಂಟ್ ಆಗ್ರಹ

Prasthutha: August 22, 2020

ಪಂಪ್‌ವೆಲ್ ಮಸ್ಜಿದ್‌ಗೆ ಹಾನಿ ಎಸಗಿ ಜಿಲ್ಲೆಯಲ್ಲಿ ಮತ್ತೆ ಅಶಾಂತಿ ಸೃಷ್ಟಿಸಲು ಯತ್ನಿಸಿದ ದುಷ್ಕರ್ಮಿಗಳ ಕಿಡಿಗೇಡಿ ಕೃತ್ಯವನ್ನು ತೀವ್ರವಾಗಿ ಖಂಡಿಸಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮಂಗಳೂರು ನಗರಾಧ್ಯಕ್ಷ ಖಾದರ್ ಕುಲಾಯಿ, ಇದರ ಬಗ್ಗೆ ಶೀಘ್ರ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ದ.ಕ.ಜಿಲ್ಲೆಯಲ್ಲಿ ಶಾಂತಿ ಕದಡುವ ಕೃತ್ಯಗಳು ನಿರಂತರವಾಗಿ ನಡೆಯುತ್ತಿವೆ. ಕೆಲ ದಿನಗಳ ಹಿಂದೆ ಮಂಗಳೂರಿನ ಮೌಲಾನಾ ಆಝಾದ್ ಅಲ್ಪಸಂಖ್ಯಾತರ ಭವನಕ್ಕೆ ಕಲ್ಲೆಸೆದು ಹಾನಿ ಉಂಟು ಮಾಡಲಾಗಿತ್ತು. ಅದಕ್ಕೂ ಮೊದಲು ಮುಸ್ಲಿಮ್ ಯುವಕರ ಮೇಲೆ ದಾಳಿ ನಡೆಸಿದ ಘಟನೆಗಳೂ ವರದಿಯಾಗಿದ್ದವು. ಇವೆಲ್ಲವೂ ಶಾಂತಿಯುತವಾಗಿರುವ ಈ ಜಿಲ್ಲೆಯಲ್ಲಿ ಕೋಮು ಸಾಮರಸ್ಯ ಕದಡುವ ಷಡ್ಯಂತ್ರಗಳಾಗಿವೆ. ಇದೀಗ ಮಸ್ಜಿದ್ ಮೇಲಿನ ದಾಳಿಯು ಇದರ ಮುಂದುವರಿದ ಭಾಗಿವಾಗಿದೆ.

ಕೋಮು ಸಾಮರಸ್ಯ ಕೆಡಿಸುವ ಉದ್ದೇಶದಿಂದ ಸಂಘಪರಿವಾರದ ಹಿನ್ನೆಲೆ ಇರುವ ಗೂಂಡಾಗಳು ನಡೆಸುತ್ತಿರುವ ಇಂತಹ ಕೃತ್ಯಗಳಿಗೆ ಕೂಡಲೇ ಕಡಿವಾಣ ಹಾಕಬೇಕು. ದುಷ್ಕರ್ಮಿಗಳ ಜಾಲವನ್ನು ಭೇದಿಸಿ ಅವರ ವಿರುದ್ಧ ಜಾಮೀನುರಹಿತ ಪ್ರಕರಣ ದಾಖಲಿಸಬೇಕು ಮತ್ತು ಜಿಲ್ಲೆಯಲ್ಲಿ ಶಾಂತಿಯ ವಾತಾವರಣವನ್ನು ಖಾತರಿಪಡಿಸಬೇಕೆಂದು ಖಾದರ್ ಕುಲಾಯಿ ಪೊಲೀಸ್ ಇಲಾಖೆ ಮತ್ತು ಜಿಲ್ಲಾಡಳಿತವನ್ನು ಪ್ರಕಟನೆಯಲ್ಲಿ ಒತ್ತಾಯಿಸಿದ್ದಾರೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!