ಪತ್ರಕರ್ತರ ಗೃಹ ನಿರ್ಮಾಣ ಸಹಕಾರ ಸಂಘಕ್ಕೆ 15ಮಂದಿ ನಿರ್ದೇಶಕರ ಆಯ್ಕೆ

Prasthutha: April 28, 2021

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಪತ್ರಕರ್ತರ ಗೃಹ ನಿರ್ಮಾಣ ಸಹಕಾರ ಸಂಘದ ನಿರ್ದೇಶಕರ ಚುನಾವಣೆ ಮಂಗಳವಾರ ನಗರದ ಪತ್ರಿಕಾಭವನದಲ್ಲಿ ನಡೆದಿದ್ದು, ಶ್ರೀನಿವಾಸ್ ನಾಯಕ್ ಇಂದಾಜೆ ಸೇರಿದಂತೆ ಒಟ್ಟು 15 ಮಂದಿ ನಿರ್ದೇಶಕರು ಆಯ್ಕೆಯಾಗಿದ್ದಾರೆ.

ಒಟ್ಟು  15 ಸ್ಥಾನಗಳಲ್ಲಿ  9 ಸಾಮಾನ್ಯ ಸ್ಥಾನವಿದ್ದು, 12 ಮಂದಿ ಕಣದಲ್ಲಿ ಉಳಿದಿದ್ದರು. ಸಾಮಾನ್ಯ ಸ್ಥಾನದಲ್ಲಿ  ಶ್ರೀನಿವಾಸ ನಾಯಕ್ ಇಂದಾಜೆ, ಆತ್ಮಭೂಷಣ್ ಭಟ್, ಇಬ್ರಾಹಿಂ ಅಡ್ಕಸ್ಥಳ, ಜಿತೇಂದ್ರ ಭಟ್, ಸುಖಪಾಲ್ ಪೊಳಲಿ, ಭಾಸ್ಕರ ರೈ ಕಟ್ಟ, ಪುಷ್ಪರಾಜ್ ಬಿ.ಎನ್., ಕೇಶವ ಕುಂದರ್ ಹಾಗೂ ವಿಲ್ಫ್ರೆಡ್ ಡಿಸೋಜ  ಆಯ್ಕೆಯಾಗಿದ್ದಾರೆ. ಹಿಂದುಳಿದ ವರ್ಗ ಪ್ರವರ್ಗ ಎ ಮೀಸಲು ಕ್ಷೇತ್ರದಿಂದ 2 ಸ್ಥಾನಕ್ಕೆ ಒಟ್ಟು  7ಮಂದಿ ಅಭ್ಯರ್ಥಿಗಳು ಸ್ಪರ್ಧಿಸಿದ್ದು, ಇವರಲ್ಲಿ  ಮುಹಮ್ಮದ್ ಆರೀಫ್, ವಿಜಯ್ ಕೋಟ್ಯಾನ್ ಪಡು ಆಯ್ಕೆಯಾಗಿದ್ದಾರೆ.

ನಾಲ್ವರು ಅವಿರೋಧ ಆಯ್ಕೆ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸ್ಥಾನದಲ್ಲಿ ಸುರೇಶ್ ಡಿ.ಪಳ್ಳಿ ಹಾಗೂ ಹರೀಶ್ ಮೋಟುಕಾನ, ಮಹಿಳಾ ಕ್ಷೇತ್ರದಲ್ಲಿ ಸತ್ಯಾವತಿ ಕೆ. ಮತ್ತು ಶಿಲ್ಪಾ ಅವಿರೋಧ ಆಯ್ಕೆಯಾಗಿದ್ದಾರೆ.

ಒಟ್ಟು  209 ಶೇರುದಾರರ ಪೆಕಿ 198 ಮಂದಿ ಮತದಾನ ಮಾಡಿದ್ದು, ಶೇ.94.73 ಮತದಾನವಾಗಿತ್ತು. ಸಹಕಾರಿ‌ ಇಲಾಖೆ ಹಿರಿಯ ನಿರೀಕ್ಷಕ ಶಿವಲಿಂಗಯ್ಯ ಎಂ. ಅವರು ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು. ವಾರ್ತಾ ಇಲಾಖೆ ಸಿಬ್ಬಂದಿ ಚುನಾವಣೆಗೆ ಸಹಕರಿಸಿದರು.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!