ಪಾಕಿಸ್ತಾನಕ್ಕಿಂತ ಭಾರತದಲ್ಲೇ ಹೆಚ್ಚು ಮುಸ್ಲಿಂ ಜನಸಂಖ್ಯೆ ಇದೆ: ಸಾಕ್ಷಿ ಮಹಾರಾಜ್

Prasthutha|

ಕಾನ್ಪುರ: ಪಾಕಿಸ್ತಾನಕ್ಕಿಂತ ಭಾರತದಲ್ಲೇ ಹೆಚ್ಚು ಮುಸ್ಲಿಮರು ಇದ್ದಾರೆ ಎಂದು ಉನ್ನಾವೊದ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಹೇಳಿಕೆ ನೀಡಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿದೆ.

ಸುದ್ದಿಸಂಸ್ಥೆ ಜೊತೆ ಮಾತನಾಡಿದ ಅವರು, ಪಾಕ್ ಗಿಂದ ಭಾರತದಲ್ಲೇ ಹೆಚ್ಚು ಮುಸ್ಲಿಂ ಜನಸಂಖ್ಯೆ ಇದೆ. ಆದ್ದರಿಂದ ಭಾರತದಲ್ಲಿ ಮುಸ್ಲಿಮರ ಅಲ್ಪಸಂಖ್ಯಾತ ಸ್ಥಾನಮಾನವನ್ನು ಶೀಘ್ರದಲ್ಲೇ ರದ್ದುಗೊಳಿಸಬೇಕು. ಅಲ್ಲದೆ ಮುಸ್ಲಿಮರು ಈಗ ತಮ್ಮನ್ನು ಹಿಂದೂಗಳ ಕಿರಿಯ ಸಹೋದರರೆಂದು ಪರಿಗಣಿಸಿ ಅವರೊಂದಿಗೆ ದೇಶದಲ್ಲಿ ವಾಸಿಸಬೇಕು ಎಂದು ಹೇಳಿದ್ದಾರೆ.

- Advertisement -

ಈ ಸಂದರ್ಭ ದೇಶದ ಹೆಚ್ಚುತ್ತಿರುವ ಜನಸಂಖ್ಯೆಯ ಹಿನ್ನೆಲೆಯಲ್ಲಿ ಮಾತನಾಡಿದ ಅವರು, ಹೆಚ್ಚುತ್ತಿರುವ ಜನಸಂಖ್ಯೆಯನ್ನು ಪರಿಶೀಲಿಸಲು ಶೀಘ್ರದಲ್ಲೇ ಸಂಸತ್ತಿನಲ್ಲಿ ಮಸೂದೆ ಮಂಡಿಸಲಾಗುವುದು. ಈ ಮೂಲಕ ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವವರು ಚುನಾವಣೆಯಲ್ಲಿ ಸ್ಪರ್ಧಿಸುವುದರಿಂದ ವಂಚಿತರಾಗುತ್ತಾರೆ ಎಂದು ತಿಳಿಸಿದ್ದಾರೆ.

ಸದಾ ವಿವಾದಾತ್ಮಕ ಹೇಳಿಕೆ ನೀಡಿ ಹೆಸರುವಾಸಿಯಾಗಿರುವ ಸಾಕ್ಷಿ ಮಹಾರಾಜ್, ಇದೀಗ ಈ ಹೇಳಿಕೆ ನೀಡಿರುವುದು ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡುತ್ತಿದೆ.

- Advertisement -