ಪಾಕಿಸ್ತಾನಕ್ಕೆ ಹೋಗಬೇಕೆಂದಿದ್ದರೆ 1947ರಲ್ಲೇ ಹೋಗುತ್ತಿದ್ದೆವು | ಫಾರೂಕ್ ಅಬ್ದುಲ್ಲಾ

Prasthutha: November 7, 2020

“ಬಿಜೆಪಿ ದೇಶವನ್ನು ತಪ್ಪಾದ ಮಾರ್ಗದಲ್ಲಿ ಮುನ್ನಡೆಸುತ್ತಿದೆ. ಜಮ್ಮು ಕಾಶ್ಮೀರ ಮತ್ತು ಲಡಾಖ್ ಜನರಿಗೆ ಸುಳ್ಳು ಭರವಸೆಗಳನ್ನು ನೀಡಲಾಗುತ್ತಿದೆ. ನನ್ನ ಜನರ ಹಕ್ಕುಗಳನ್ನು ಪುನಃಸ್ಥಾಪಿಸುವವರೆಗೆ ನಾನು ಸಾಯುವುದಿಲ್ಲ. ಜನರಿಗೆ ಏನು ಮಾಡಬೇಕೋ ಅದನ್ನು ಮಾಡಿದ ನಂತರವೇ ನಾನು ಈ ಜಗತ್ತನ್ನು ಬಿಡುತ್ತೇನೆ” ಎಂದು ಫಾರೂಕ್ ಅಬ್ದುಲ್ಲಾ ಭಾವುಕರಾಗಿ ಹೇಳಿದ್ದಾರೆ.

ಜಮ್ಮು ಕಾಶ್ಮೀರ ಪಾಕಿಸ್ತಾನದೊಂದಿಗೆ ಹೋಗಲು ಬಯಸಿದ್ದರೆ ಅದು 1947ರಲ್ಲೇ ಆಗುತ್ತಿತ್ತು. ತಡೆಯುವವರು ಯಾರೂ ಇರಲಿಲ್ಲ. ಆದರೆ ನಮ್ಮ ದೇಶ ಮಹಾತ್ಮಾ ಗಾಂಧಿಯವರ ಭಾರತ. ಬಿಜೆಪಿಯ ಭಾರತವಲ್ಲ ಎಂದು ಫಾರೂಕ್ ಅಬ್ದುಲ್ಲಾ ಸ್ಪಷ್ಟಪಡಿಸಿದ್ದಾರೆ.

ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯನ್ನು ಕೇಂದ್ರ ಸರಕಾರ 2019 ರ ಅಗಸ್ಟ್ 5ರಂದು ರದ್ದುಪಡಿಸಿತ್ತು. ಇದರೊಂದಿಗೆ ಪಾರೂಕ್ ಅಬ್ದುಲ್ಲಾ ಸೇರಿದಂತೆ ಇತರ ನಾಯಕರು ಗೃಹಬಂಧನದಲ್ಲಿದ್ದರು. ಬಿಡುಗಡೆಯಾದ ನಂತರ ಮೊದಲ ಬಾರಿಗೆ ಅವರು ನಿನ್ನೆ ಪಕ್ಷದ ಕಾರ್ಯಕರ್ತನ್ನು ಉದ್ದೇಶಿಸಿ ಮಾತನಾಡಿದರು.

ಜಮ್ಮು ಕಾಶ್ಮೀರದಲ್ಲಿ 370ನೇ ವಿಧಿಯನ್ನು ಪುನಃ ಸ್ಥಾಪಿಸಬೇಕೆಂದು ಒತ್ತಾಯಿಸಿ ಆರು ರಾಜಕೀಯ ಪಕ್ಷಗಳು ಸೇರಿಕೊಂಡು ಪೀಪಲ್ಸ್ ಅಲಯನ್ಸ್ ಫಾರ್ ಗುಪ್ಕಾರ್ ಡಿಕ್ಲರೇಷನ್ ಎಂಬ ಹೆಸರಿನಲ್ಲಿ ಮೈತ್ರಿ ಮಾಡಿಕೊಂಡಿವೆ. ಫಾರೂಕ್ ಅಬ್ದುಲ್ಲಾ ಗುಪ್ಕಾರ್ ಮೈತ್ರಿ ಕೂಟದ ನಾಯಕ. ಮಾಜಿ ಮುಖ್ಯಮಂತ್ರಿ ಮತ್ತು ಪಿಡಿಪಿ ಮುಖಂಡ ಮೆಹಬೂಬಾ ಮುಫ್ತಿ ಉಪಾಧ್ಯಕ್ಷರಾಗಿದ್ದಾರೆ. ಈ ಮೈತ್ರಿಯಲ್ಲಿ ನ್ಯಾಷನಲ್ ಕಾನ್ಫರೆನ್ಸ್, ಪಿಡಿಪಿ, ಪೀಪಲ್ಸ್ ಕಾನ್ಫರೆನ್ಸ್, ಸಿಪಿಎಂ, ಪೀಪಲ್ಸ್ ಮೂವ್ ಮೆಂಟ್, ಅವಾಮಿ ನ್ಯಾಷನಲ್ ಕಾನ್ಫರೆನ್ಸ್ ಸೇರಿವೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!