ಪಾಕಿಸ್ತಾನ | ಐಸ್ ಫ್ಯಾಕ್ಟರಿಯಲ್ಲಿ ಭಾರೀ ಸ್ಫೋಟ | 8 ಮಂದಿ ಸಾವು

Prasthutha|

ಕರಾಚಿ: ನ್ಯೂ ಕರಾಚಿ ಕೈಗಾರಿಕಾ ಪ್ರದೇಶದಲ್ಲಿರುವ ಐಸ್ ಫ್ಯಾಕ್ಟರಿಯಲ್ಲಿ ಬೃಹತ್ ಬಾಯ್ಲರ್ ಸ್ಫೋಟಗೊಂಡ ಪರಿಣಾಮ, 8 ಮಂದಿ ಮೃತಪಟ್ಟ ಭೀಕರ ಘಟನೆ ಸಂಭವಿಸಿದೆ.

ಈ ದುರ್ಘಟನೆಯಲ್ಲಿ 30ಕ್ಕೂ ಅಧಿಕ ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ. ಅಕ್ಕಪಕ್ಕದ 3 ಕಾರ್ಖಾನೆಗಳಿಗೂ ಹಾನಿಯಾಗಿದ್ದಲ್ಲದೇ ಕೆಲವು ಮನೆಗಳ ಕಿಟಕಿ ಗಾಜುಗಳು ಪುಡಿಪುಡಿಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

8 ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಗಾಯಗೊಂಡವರನ್ನು ರಕ್ಷಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -