ಪ್ರಧಾನ ಮಂತ್ರಿ, ಕೇಂದ್ರ ಮಂತ್ರಿ ಆಗೋ ಆಸೆ ನನಗಿಲ್ಲ: ಸಿದ್ದರಾಮಯ್ಯ

Prasthutha|

ಬಾಗಲಕೋಟೆ: ಪ್ರಧಾನ ಮಂತ್ರಿ ಅಥವಾ ಕೇಂದ್ರ ಮಂತ್ರಿ ಆಗುವ ಆಸೆ ತನಗಿಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಗ್ರಾ.ಪಂ.ಚುನಾವಣೆಯ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಹೇಳಿದ್ದಾರೆ.

 ಬಾದಾಮಿಯ ಗುಳೇದಗುಡ್ಡದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, “ರಾಷ್ಟ್ರ ರಾಜಕಾರಣಕ್ಕೆ ಹೋಗಲು ನನಗೆ ಇಷ್ಟವಿಲ್ಲ. ಹೀಗಾಗಿ ದೆಹಲಿ ರಾಜಕಾರಣಕ್ಕೆ ಹೋಗುವುದಿಲ್ಲ. ಮನುಷ್ಯ ತನ್ನ ಶಕ್ತಿ ಮೀರಿ ಯೋಚಿಸಬಾರದು. ಪ್ರಧಾನ ಮಂತ್ರಿಯೋ ಅಥವಾ ಕೇಂದ್ರ ಮಂತ್ರಿಯೋ ಆಗುವ ಆಸೆ ನನಗಿಲ್ಲ.” ಎಂದು ತನ್ನ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

- Advertisement -

ಸಿದ್ದರಾಮಯ್ಯನವರು ರಾಷ್ಟ್ರ ರಾಜಕಾರಣಕ್ಕೆ ಬರಲೇ ಬೇಕು ಎಂದು ಮೊದಲಿನಿಂದಲೂ ಒತ್ತಾಯಿಸುತ್ತಿದ್ದ ಹಲವರಿಗೆ ಮತ್ತೊಮ್ಮೆ ರಾಷ್ಟ್ರ ರಾಜಕಾರಣ ನಿರಾಕರಿಸಿ ಸ್ಪಷ್ಟಪಡಿಸಿದ್ದಾರೆ.

- Advertisement -