ಬಾಬ್ರಿ ಧ್ವಂಸ ತೀರ್ಪು ವಿರೋಧಿಸಿ ಪ್ರತಿಭಟನೆ: ಎಸ್.ಡಿ.ಪಿ.ಐ ಕಾರ್ಪೊರೇಟರ್ ಮುನೀಬ್ ಬೆಂಗ್ರೆ, ರಾಜ್ಯ ಕಾರ್ಯದರ್ಶಿ ಬಂಧನ

Prasthutha|

ಮಂಗಳೂರು: ಬಾಬ್ರಿ ಮಸ್ಜಿದ್ ಧ್ವಂಸ ಆರೋಪಿಗಳನ್ನು ದೋಷಮುಕ್ತಗೊಳಿಸಿ ವಿಶೇಷ ಸಿಬಿಐ ನ್ಯಾಯಾಲಯ ನೀಡಿದ ತೀರ್ಪನ್ನು ಖಂಡಿಸಿ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯ ಮುಂದೆ ಇಂದು ಪ್ರತಿಭಟನೆ ನಡೆಸುತ್ತಿದ್ದ  ಎಸ್.ಡಿ.ಪಿ.ಐ ಕಾರ್ಪೊರೇಟರ್ ಮುನೀಬ್ ಬೆಂಗ್ರೆ, ರಾಜ್ಯ ಕಾರ್ಯದರ್ಶಿ ಅಶ್ರಫ್ ಮಾಚಾರ್  ಹಾಗೂ ಇತರ ನಾಯಕರನ್ನು ಬಂಧಿಸಿದ್ದಾರೆ.

- Advertisement -

ಮುನೀಬ್ ಬೆಂಗ್ರೆ ನೇತೃತ್ವದಲ್ಲಿ ನಡೆಯುತ್ತಿದ್ದ ಈ ಪ್ರತಿಭಟನೆಯಲ್ಲಿ ಜಿಲ್ಲಾ ಸಮಿತಿ ಸದಸ್ಯ ಆನಂದ ಮಿತ್ತಬೈಲು, ಎಸ್.ಡಿ.ಪಿ.ಐ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾರ್ಯದರ್ಶಿ ಅಕ್ಬರ್ ಮತ್ತು ಮುಲ್ಕಿ-ಮೂಡಬಿದ್ರಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಆಸಿಫ್ ಕೋಟೆಬಾಗಿಲು ಪೊಲೀಸರಿಂದ ಬಂಧಿಸಲ್ಪಟ್ಟ ಇತರ ನಾಯಕರಾಗಿದ್ದಾರೆ.

ಪ್ರತಿಭಟನಾಕಾರರು ಸಿಬಿಐ ನ್ಯಾಯಾಲಯ ನೀಡಿದ ತೀರ್ಪಿನ್ನು ವಿರೋಧಿಸಿ ಘೋಷಣೆ ಕೂಗುತ್ತಿದ್ದರು. ತೀರ್ಪು ಧ್ವಂಸದ ಸಂಚುಕೋರರನ್ನು ಬಿಡುಗಡೆಗೊಳಿಸುತ್ತಿದ್ದು ನ್ಯಾಯದ ಅಣಕವಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

- Advertisement -