ಬಿಎಂಟಿಸಿ ಬಸ್ ಪ್ರಯಾಣ ದರ ಏರಿಕೆಗೆ ಸರ್ಕಾರದ ಚಿಂತನೆ

Prasthutha|

- Advertisement -

ಬೆಂಗಳೂರು: ಕೊರೋನಾ ಸೋಂಕಿನಿಂದ ಈಗ ತಾನೆ ಚೇತರಿಕೊಳ್ಳುತ್ತಿರುವ ಜನತೆಗೆ ರಾಜ್ಯ ಸರ್ಕಾರ ಬಿಎಂಟಿಸಿ ಬಸ್ ಪ್ರಯಾಣ ದರದಲ್ಲಿ ಹೆಚ್ಚಳ ಮಾಡುವ ಮೂಲಕ ಮತ್ತೊಂದು ಶಾಕ್ ನೀಡಲು ಹೊರಟಿದೆ. ಬಸ್ ಪ್ರಯಾಣ ದರ ಹೆಚ್ಚಳದ ಚಿಂತನೆ ಮಾಡಿದ್ದು, ಈ ಕುರಿತು ಮುಖ್ಯಮಂತ್ರಿಗಳು ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಅವರು ತಿಳಿಸಿದ್ದಾರೆ.

ಮೂರು ಸಾರಿಗೆ ನಿಗಮಗಳ ಟಿಕೆಟ್ ದರವನ್ನು ಕಳೆದ ವರ್ಷ ಶೇ. 12 ರಷ್ಟು ಹೆಚ್ಚಳ ಮಾಡಲಾಗಿತ್ತು. ಆದರೆ ಬಿಎಂಟಿಸಿ ಟಿಕೆಟ್ ದರವನ್ನು ಹೆಚ್ಚಳ ಮಾಡಿರಲಿಲ್ಲ. ಹೀಗಾಗಿ ಬಿಎಂಟಿಸಿ ಟಿಕೆಟ್ ದರ ಹೆಚ್ಚಿಸುವ ಪ್ರಸ್ತಾಪ ಇದ್ದು, ದರ ಹೆಚ್ಚಿಸುವ ಚಿಂತನೆ ಇದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

- Advertisement -

ಬಿಎಂಟಿಸಿ ಶೇಕಡ 1 ರಷ್ಟು ಟಿಕೆಟ್ ದರ ಹೆಚ್ಚಿಸುವಂತೆ ಪ್ರಸ್ತಾಪ ಮಾಡಿದೆ. ಆದರೆ ಅಷ್ಟು ದೊಡ್ಡ ಪ್ರಮಾಣದಲ್ಲಿ ಟಿಕೆಟ್ ದರ ಏರಿಕೆ ಮಾಡಲು ಸಾಧ್ಯವಾಗುವುದಿಲ್ಲ. ಇದರಿಂದ ಸಾರ್ವಜನಿಕರಿಗೆ ಹೆಚ್ಚಿನ ಹೊರೆಯಾಗಲಿದೆ. ಹೀಗಾಗಿ ಸಾರ್ವಜನಿಕರಿಗೆ ಹೊರೆಯಾಗದಂತೆ ಟಿಕೆಟ್ ದರ ಹೆಚ್ಚಿಸಲಾಗುವುದು. ಟಿಕೆಟ್ ದರ ಹೆಚ್ಚಳ ಸಂಬಂಧ ಮುಖ್ಯಮಂತ್ರಿಗಳು ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾದೆ ಎಂದು ಸಚಿವರು ಹೇಳಿದ್ದಾರೆ.

Join Whatsapp