ಬಿಡಿಎಯ ಭೂಸ್ವಾಧೀನ ಅಧಿಸೂಚನೆ ರದ್ದುಪಡಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ

Prasthutha|

ಬೆಂಗಳೂರು: ಡಾ.ಶಿವರಾಮ ಕಾರಂತ ಬಡಾವಣೆಯ ಹೆಸರಿನಲ್ಲಿ ಬಿಡಿಎ ಯಿಂದ ಅಂತಿಮ ಭೂ ಸ್ವಾಧೀನ ಅದಿಸೂಚನೆಯನ್ನು ರದ್ದುಪಡಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮತ್ತು ಡಾ.ಶಿವರಾಮ ಕಾರಂತ ಬಡಾವಣೆ ಹೋರಾಟ ಸಮಿತಿ ಗಾಣಿಗರಹಳ್ಳಿ ಗ್ರಾಮ ಸಮಿತಿ ಸರಕಾರದ ವಿರುದ್ಧ ಬೆಂಗಳೂರಿನ ಮೌರ್ಯ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸಿದೆ.

ಪೋಲಿಸರು ಯಾವ ರೀತಿಯಲ್ಲಿ ಹತ್ತಿಕ್ಕುತ್ತಾರೆ ಎಂಬುವುದಕ್ಕೆ ಈ ಪ್ರತಿಭಟನೆಯೇ ಸಾಕ್ಷಿ. ಬಿಡಿಎ ಕೇಂದ್ರ ಕಚೇರಿ ಮುಂಭಾಗದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯನ್ನು ಮೌರ್ಯ ಸರ್ಕಲ್ ನಲ್ಲಿ ಮಾಡುವಂತೆ ಹೇಳಿದ್ದಾರೆ. ಜನರಿಗೆ ಇಲ್ಲಿ ತಮ್ಮ ಹಕ್ಕುಗಳನ್ನು ಕೇಳುವ ಅವಕಾಶವಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

- Advertisement -

ಮುಖ್ಯಮಂತ್ರಿ ಯಡಿಯೂರಪ್ಪ ರನ್ನು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದ ನಿಯೋಗ ಭೇಡಿ ಮಾಡಿ ಮನವಿ ಸಲ್ಲಿಸಿದ್ದಾರೆ. ಮುಖ್ಯಮಂತ್ರಿಗಳು ಪ್ರತಿಭಟನಾಕಾರರ ಬೇಡಿಕೆಗೆ ಸ್ಪಂದಿಸಿ ಭರವಸೆ ನೀಡಿರುವುದರಿಂದ ಪ್ರತಿಭಟನೆಯನ್ನು ಹಿಂಪಡೆಯುತ್ತಿದ್ದೇವೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ಪ್ರತಿಕ್ರಿಯಿಸಿದ್ದಾರೆ.

ರೈತರನ್ನು ಪೊಲೀಸರು ಬಂಧಿಸಿದ್ದಲ್ಲದೆ ಹಲ್ಲೆ ಮಾಡಿದ್ದಾರೆ. ಇದು ಯಾವ ಸೀಮೆಯ ಸರಕಾರ ಎಂದು ಕೋಡಿಹಳ್ಳಿ ಚಂದ್ರಶೇಖರ್ ಪ್ರಶ್ನಿಸಿದ್ದು, ಇದೇ ರೀತಿ ಸರಕಾರ ಮುಂದುವರಿದರೆ ಏನು ಮಾಡಬೇಕೆಂದು ನಮಗೂ ಗೊತ್ತಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಶಿವರಾಮ ಕಾರಂತ ಬಡಾವಣೆಯ ರಾಮಕೃಷ್ಣ ಮಾತನಾಡಿ, ಈ ರೀತಿಯಲ್ಲಿ ಅನಿಷ್ಟವಾಗಿ ಅಧಿಕಾರಿಗಳು ವರ್ತಿಸುತ್ತಿದ್ದಾರೆ ಎಂದರೆ ನಾಗರೀಕರು ಏನು ಮಾಡಬೇಕು. ನಾಗರೀಕರ ಮೇಲೆ ದೌರ್ಜನ್ಯ ನಡೆಸುವುದನ್ನು ನಿಲ್ಲಿಸಿಬಿಡಿ. ರೈತರನ್ನು ಎಲ್ಲಾ ಹಂತಗಳಲ್ಲಿ ಸರಕಾರ ಧಮನಿಸುತ್ತಿದೆ. ಪ್ರಾಣ ಬೇಕಾದರೂ ಕೊಡುತ್ತೇವೆ ಆದರೆ ಈ ಜಾಗವನ್ನು ಕೊಡುವುದಿಲ್ಲ ಎಂದು ಹೇಳಿದ್ದಾರೆ.

- Advertisement -