ಬೆಂಗಳೂರು | ಕಾರ್ಮಿಕರ ಮೇಲೆ ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆ

Prasthutha|

ಕಟ್ಟಡ ನಿರ್ಮಾಣ ಕಾರ್ಮಿಕರ ಮೇಲೆ ದುಷ್ಕರ್ಮಿಗಳ ತಂಡವೊಂದು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಜ್ಞಾನ ಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬಳ್ಳಾರಿಯ ಶಿರುಗುಪ್ಪ ಮೂಲದ ಹನುಮಂತಮ್ಮ ಮತ್ತು ಬಸವರಾಜ ಅವರ ಮನೆಗೆ ನುಗ್ಗಿದ ದುಷ್ಕರ್ಮಿಗಳ ತಂಡವು ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಪರಿಣಾಮ 12 ವರ್ಷದ ಪುತ್ರ ಆಸ್ಪತ್ರೆಯಲ್ಲಿಯೇ ಮೃತಪಟ್ಟಿದ್ದು, ತಾಯಿ ಹನುಮಂತಮ್ಮ ಗಂಭೀರ ಗಾಯಗೊಂಡಿದ್ದಾರೆ, ಚಿಕಿತ್ಸೆ ಪಡೆಯುತ್ತಿದ್ದಾರೆ.

- Advertisement -

ದಂಪತಿಯು ಹಲವು ವರ್ಷಗಳಿಂದ ಕೂಲಿ ಕಾರ್ಮಿಕರಾಗಿ ಕಾರ್ಯ ನಿರ್ವಹಿಸುತ್ತಿದ್ದು, ಕೆಲ ತಿಂಗಳಿನಿಂದ ಜ್ಞಾನಗಂಗಾ ನಗರದಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡದ ಶೆಡ್ ವೊಂದರಲ್ಲಿ ವಾಸವಾಗಿದ್ದರು ಎಂದು ಮೂಲಗಳು ತಿಳಿಸಿವೆ.

ಸ್ಥಳಕ್ಕಾಗಮಿಸಿದ ಜ್ಞಾನ ಭಾರತಿ ಠಾಣೆ ಪೊಲೀಸರು ಪರಿಶೀಲನೆ ನಡೆಸಿ, ತನಿಖೆ ಮುಂದುವರಿಸಿದ್ದಾರೆ.

- Advertisement -