ಬೆಂಗಳೂರು | ಸಾವಿನಲ್ಲೂ ಸಾರ್ಥಕತೆ | ಅಂಗಾಂಗ ದಾನದ ಮೂಲಕ ಐವರಿಗೆ ಆಸರೆಯಾದ ಮಹಿಳೆ

Prasthutha|

ಬೆಂಗಳೂರಿನ ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದ ಯಲಹಂಕದ 49 ವರ್ಷದ ಮಹಿಳೆಯೊಬ್ಬರು ತನ್ನ ಅಂಗಾಂಗ ದಾನದ ಮೂಲಕ ಐವರಿಗೆ ಆಸರೆಯಾಗಿ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.

ಡಿಸೆಂಬರ್ 13ರಂದು ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಮಹಿಳೆಯನ್ನು ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಸಂದರ್ಭ ಮಹಿಳೆಗೆ ಕೃತಕ ಉಸಿರಾಟದ ಸಂಪರ್ಕ ಕಲ್ಪಿಸಲಾಗಿತ್ತು.

- Advertisement -

ಈ ಸಂದರ್ಭ ಮಹಿಳೆಯ ಮೆದುಳು ನಿಷ್ಕ್ರಿಯಗೊಂಡಿದ್ದನ್ನು ಕುಟುಂಬಸ್ಥರಿಗೆ ಖಚಿತಪಡಿಸಿದ ವೈದ್ಯರು ಅಂಗಾಂಗ ದಾನದ ಬಗ್ಗೆ ಮನವೊಲಿಸಿದ್ದಾರೆ. ಇದಕ್ಕೆ ಒಪ್ಪಿದ ಕುಟುಂಬಸ್ಥರು ಬಿಜಿಎಸ್ ಆಸ್ಪತ್ರೆಗೆ ಯಕೃತ್, ಅಪೋಲೋ ಆಸ್ಪತ್ರೆಗೆ ಎಡ ಮೂತ್ರಪಿಂಡ, ಜಯದೇವ ಆಸ್ಪತ್ರೆಗೆ ಹೃದಯ, ನಾರಾಯಣ ನೇತ್ರಾಲಯಕ್ಕೆ ಕಣ್ಣುಗಳನ್ನು ಹಾಗೂ ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ಬಲ ಮೂತ್ರಪಿಂಡವನ್ನು ಹೀಗೆ ಐವರಿಗೆ ತನ್ನ ಅಂಗಾಂಗವನ್ನು ದಾನ ಮಾಡಿದ್ದಾರೆ.

ಮಹಿಳೆಯಿಂದ ಪಡೆದಂತ ಅಂಗಾಂಗಗಳನ್ನು ಅಂಗಾಂಗ ದಾನ ನಿರೀಕ್ಷೆಯಲ್ಲಿದ್ದವರಿಗೆ ಕಸಿ ಮಾಡಿದ್ದರಿಂದಾಗಿ ಐವರಿಗೆ ಮಹಿಳೆ ಆಸರೆಯಾಗಿದ್ದಾರೆ.

- Advertisement -