ಬೈಕ್ ಅಪಘಾತದಲ್ಲಿ ಗಾಯಗೊಂಡ ಸೋನಿ ಸೋರಿ

Prasthutha|

ಛತ್ತೀಸ್ ಗಡದ ಪ್ರಸಿದ್ಧ ಬುಡಕಟ್ಟು ರಾಜಕೀಯ ನಾಯಕಿ ಸೋನಿ ಸೋರಿ ಅಪಘಾತದಲ್ಲಿ ಗಾಯಗೊಂಡಿರುವ ಘಟನೆ ವರದಿಯಾಗಿದೆ.

- Advertisement -

ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭ ಕುಸಿದು ಬಿದ್ದ ಪರಿಣಾಮ ಅವರು ಗಾಯಗೊಂಡಿದ್ದಾರೆ. ಗಾಯವು ಎಷ್ಟು ಗಂಭೀರವಾಗಿದೆ ಎಂಬುದು ಇನ್ನೂ ದೃಢಪಟ್ಟಿಲ್ಲ.

2018ರ ಫ್ರಂಟ್ ಲೈನ್ ಡಿಫೆಂಡರ್ಸ್ ಪ್ರಶಸ್ತಿ ವಿಜೇತೆ ಸೋನಿ ಸೋರಿ ಅವರ ಮೇಲೆ ಈ ಹಿಂದೆ ಮಾವೋವಾದಿಗಳನ್ನು ಸಂಪರ್ಕಿಸಿದ್ದಾರೆ ಎಂದು ಸುಳ್ಳು ಆರೋಪ ಹೊರಿಸಲಾಗಿದ್ದು, ಅವರ ವಿರುದ್ಧ ದಾಖಲಾದ ಹೆಚ್ಚಿನ ಪ್ರಕರಣಗಳಲ್ಲಿ ಖುಲಾಸೆಗೊಂಡಿದ್ದಾರೆ.

- Advertisement -

ಅವರ ಮಗ ದೀಪೇಂದ್ರ ‘ಸಬರಂಗ್ ಇಂಡಿಯಾ’ಗೆ ಘಟನೆಯನ್ನು ದೃಢಪಡಿಸಿದ್ದಾರೆ. ಸೋನಿ ಅವರನ್ನು ಜಗದಲ್ಪುರ್ ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.

Join Whatsapp