ಭೀಮ್ ಆರ್ಮಿ ಚಂದ್ರಶೇಖರ್ ಆಜಾದ್ ಬೆಂಗಾವಲು ಪಡೆ ಮೇಲೆ ಗುಂಡಿನ ದಾಳಿ

Prasthutha|

ನವದೆಹಲಿ: ತಮ್ಮ ಬೆಂಗಾವಲು ಪಡೆ ಮೇಲೆ ಗುಂಡಿನ ದಾಳಿ ನಡೆದಿದೆ ಎಂದು ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ತಿಳಿಸಿದ್ದಾರೆ. ಉತ್ತರ ಪ್ರದೇಶದ ಬುಲಂದ್ ಶಹರ್ ನಲ್ಲಿ ಭಾನುವಾರ ರಾತ್ರಿ ಈ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ.

ಬುಲಂದ್ ಶಹರ್ ಉಪ ಚುನಾವಣೆಯ ಹಿನ್ನೆಲೆಯಲ್ಲಿ ತಮ್ಮ ಪಕ್ಷದ ಕಾರ್ಯಕರ್ತರು ಚುನಾವಣಾ ಪ್ರಚಾರ ನಡೆಸುತ್ತಿದ್ದ ವೇಳೆ ಈ ದಾಳಿ ನಡೆದಿದೆ.

- Advertisement -

ತಮ್ಮ ಬೆಂಗಾವಲಿನ ಮೇಲೆ ಗುಂಡಿನ ದಾಳಿ ನಡೆಸುವ ಮೂಲಕ ಬುಲಂದ್ ಶಹರ್ ಚುನಾವಣೆಯ ತಮ್ಮ ಅಭ್ಯರ್ಥಿಯನ್ನು ವಿರೋಧಿಗಳು ಭಯಭೀತಗೊಳಿಸಿದ್ದಾರೆ. ಇದು ಅವರ ಹತಾಶೆಯನ್ನು ತೋರಿಸುತ್ತದೆ. ಅವರು ಪರಿಸ್ಥಿತಿ ವಿಷಕಾರಿಯಾಗಿರಬೇಕು ಎಂದು ಅವರು ಬಯಸಿದ್ದಾರೆ. ಆದರೆ ನಾವು ಆ ರೀತಿಯಾಗಲು ಬಿಡುವುದಿಲ್ಲ ಎಂದು ಆಜಾದ್ ಟ್ವೀಟ್ ಮಾಡಿದ್ದಾರೆ.

ಬುಲಂದ್ ಶಹರ್ ಉಪಚುನಾವಣೆಯಲ್ಲಿ ಚಂದ್ರಶೇಖರ್ ಆಜಾದ್ ಅವರ ಆಜಾದ್ ಸಮಾಜ್ ಪಾರ್ಟಿ ಅಭ್ಯರ್ಥಿಯಾಗಿ ಹಾಜಿ ಯಾಮೀನ್ ಸ್ಪರ್ಧಿಸುತ್ತಿದ್ದಾರೆ. ನ.3ರಂದು ಮತದಾನ ನಡೆಯಲಿದೆ.

- Advertisement -