ಮಂಗಳೂರು| ರಾಷ್ಟ್ರವಿರೋಧಿ ಬರಹ ಪ್ರಕರಣ| ಸಿಸಿ ಕ್ಯಾಮರಾದಲ್ಲಿ ಘಟನೆಯ ದೃಶ್ಯಾವಳಿ ಸೆರೆ| ಪೊಲೀಸರಿಂದ ಪರಿಶೀಲನೆ

Prasthutha|

ಮಂಗಳೂರಿನ ಅಪಾರ್ಟ್ಮೆಂಟ್ ಒಂದರ ಗೋಡೆ ಮೇಲೆ ರಾಷ್ಟ್ರವಿರೋಧಿ ಬರಹ ಪತ್ತೆಯಾದ ಹಿನ್ನೆಲೆಯಲ್ಲಿ ತನಿಖಾ ತಂಡ ರಚಿಸಲಾಗಿದ್ದು, ತ್ವರಿತವಾಗಿ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಕಮೀಷನರ್ ವಿಕಾಸ್ ಕುಮಾರ್ ಹೇಳಿದ್ದಾರೆ.

- Advertisement -

ಘಟನಾಸ್ಥಳದ ಸುತ್ತಲೂ ಇದ್ದ ಸಿಸಿ ಕ್ಯಾಮರಾದಲ್ಲಿ ಘಟನೆಯ ದೃಶ್ಯಾವಳಿ ಸೆರೆಯಾಗಿರುವ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಗೋಡೆ ಮೇಲೆ ‘ಲಷ್ಕರ್ ಇ ತೊಯ್ಬಾ ಜಿಂದಾಬಾದ್’ ಎಂದು ಬರೆಯಲಾಗಿತ್ತು. ಸಂಘಪರಿವಾರವನ್ನು ನಿಯಂತ್ರಿಸಲು ಲಷ್ಕರ್ ಉಗ್ರರನ್ನು ಆಹ್ವಾನಿಸುವಂತೆ ಮಾಡಬೇಡಿ ಎಂದು ಸಂಘಪರಿವಾರಕ್ಕೆ ಬೆದರಿಕೆ ಹಾಕುವ ರೀತಿಯಲ್ಲಿ ಬರೆಯಲಾಗಿತ್ತು.

Join Whatsapp