ಮಂಗಳೂರು ಸೆಂಟ್ರಲ್ ಮಾರುಕಟ್ಟೆ ಬಂದ್ ಗೆ ಜಿಲ್ಲಾಡಳಿತ ಆದೇಶ

Prasthutha|

ಮಂಗಳೂರು : ಕೊರೋನ ಸಂದರ್ಭದಲ್ಲಿ ಸಾಮಾಜಿಕ ಅಂತರ ಕಾಪಾದಿಕೊಳ್ಳುವ ಸಲುವಾಗಿ ಮಂಗಳೂರಿನ ಸೆಂಟ್ರಲ್ ಮಾರುಕಟ್ಟೆ ಬಂದ್ ಮಾಡಲು ಜಿಲ್ಲಾಡಳಿತ ಆದೇಶಿಸಿದೆ. ಈ ಕುರಿತು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಆದೇಶ ಹೊರಡಿಸಿದ್ದಾರೆ. ಮಾರುಕಟ್ಟೆಯಲ್ಲಿನ ವ್ಯಾಪಾರಿಗಳು ಬೈಕಂಪಾಡಿ ಎಪಿಎಂಸಿಯಲ್ಲಿ ವ್ಯಾಪಾರ ನಿರ್ವಹಿಸುವಂತೆ ಸೂಚಿಸಲಾಗಿದೆ.

ಜಿಲ್ಲಾಡಳಿತದ ಕ್ರಮ ಪಾಲಿಸದ ವ್ಯಾಪಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಆದೇಶ ಪಾಲನೆಯಾಗುವಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ನಿರ್ದೇಶಿಸಲಾಗಿದೆ.

- Advertisement -

ಮಂಗಳೂರು ಮಹಾನಗರ ಪಾಲಿಕೆ ನ್ಯಾಯಾಲಯದಲ್ಲಿ ಸೆಂಟ್ರಲ್ ಮಾರುಕಟ್ಟೆಯಲ್ಲಿ ವ್ಯಾಪಾರ ವಹಿವಾಟು ಬಂದ್ ಮಾಡುವ ಕುರಿತು ದಾಖಲಿಸಿದ್ದ ದೂರನ್ನು ಹಿಂಪಡೆದಿತ್ತು. ಹೀಗಾಗಿ ಆ.13ರಂದು ವ್ಯಾಪಾರಿಗಳು ಮಾರುಕಟ್ಟೆಯಲ್ಲಿ ವ್ಯಾಪಾರ ಆರಂಭಿಸಿದ್ದರು.

- Advertisement -