ಮಂಗಳೂರು: ಹಾಡಹಗಲೇ ದುಷ್ಕರ್ಮಿಗಳ ತಂಡದಿಂದ ಗುಂಡಿನ ದಾಳಿ

Prasthutha|

ಮಂಗಳೂರು: ನಗರದ ಫಳ್ನೀರ್ ನಲ್ಲಿ ಹಾಡಹಗಲೇ ಗುಂಡಿನ ದಾಳಿ ನಡೆದಿದ್ದು, ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

 ಈ ಘಟನೆಯು ಶುಕ್ರವಾರ ಸಂಜೆ 5:30ರ ಸುಮಾರಿಗೆ ನಡೆದಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆಂದು ಹೇಳಲಾಗಿದೆ. ಗಾಯಾಳುಗಳ ಪೈಕಿ ಇಬ್ಬರನ್ನು ನಗರದ ಖಾಸಗಿ ಆಸ್ಪತ್ರೆಗೆ, ಇನ್ನುಳಿದ ಇಬ್ಬರನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -

ಸಮೋಸದ ವಿಚಾರದಲ್ಲಿ ಜಗಳವು ಆರಂಭಗೊಂಡಿದ್ದು, ನಂತರ ಅದು ಮಾರಾಮಾರಿಗೆ ತಿರುಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಕೊನೆಗೆ ತಂಡವು ಗುಂಡು ಹಾರಿಸಿ ಪರಾರಿಯಾಗಿದೆ ಎಂದು ತಿಳಿದು ಬಂದಿದೆ. ಏರ್ ಪಿಸ್ತೂಲ್‌ನಿಂದ ಗುಂಡು ಹಾರಿಸಿರುವ ಸಾಧ್ಯತೆ ಇದ್ದು, ಘಟನೆಯ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸ್ಥಳಕ್ಕೆ ಪಾಂಡೇಶ್ವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ದಾಳಿಯ ಬಗ್ಗೆ ನಿಖರ ಕಾರಣ ತಿಳಿದುಬಂದಿಲ್ಲ.

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.

- Advertisement -