ಮುಂದಿನ ಚುನಾವಣೆಯಲ್ಲಿ ಕೇರಳ, ತಮಿಳುನಾಡಿನಲ್ಲಿ ಬಿಜೆಪಿಗೆ ಜಯ : ಸಿ.ಟಿ. ರವಿ

Prasthutha|

ಹುಬ್ಬಳ್ಳಿ : ಮುಂಬರುವ ಚುನಾವಣೆಗಳಲ್ಲಿ ತಮಿಳುನಾಡು, ಪಾಂಡಿಚೇರಿ, ಕೇರಳದಲ್ಲಿ ಬಿಜೆಪಿ ಅಧಿಕಾರ ಹಿಡಿಯಲಿದೆ ಎಂದು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದ್ದಾರೆ.
ದಕ್ಷಿಣ ಮಾತ್ರವಲ್ಲದೆ, ಪಶ್ಚಿಮ ಬಂಗಾಳದಲ್ಲೂ ಪಕ್ಷದ ವಿಜಯ ಯಾತ್ರೆ ಮುಂದುವರಿಯಲಿದೆ ಎಂದು ಅವರು ತಿಳಿಸಿದ್ದಾರೆ.

- Advertisement -

“ನಮ್ಮಲ್ಲಿ ಒಂದು ತಂತ್ರಗಾರಿಕೆಯಿದೆ, ಈ ಆಧಾರದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗಳಲ್ಲಿ ನಿರೀಕ್ಷಿತ ಫಲಿತಾಂಶ ಪಡೆಯಲು ಕಾರ್ಯ ನಿರ್ವಹಿಸಲಿದ್ದೇವೆ’’ ಎಂದು ಅವರು ತಿಳಿಸಿದ್ದಾರೆ. ದಕ್ಷಿಣ ಭಾರತದ ಉಸ್ತುವಾರಿ ತಮಗೆ ನೀಡಲಾಗಿದ್ದು, ಈ ಭಾಗದಲ್ಲಿ ಓಡಾಡುತ್ತಿದ್ದೇನೆ. ಇಲ್ಲಿ ಪಕ್ಷ ಗೆಲ್ಲುವ ವಿಶ್ವಾಸವಿದೆ ಎಂದು ಅವರು ಹೇಳಿದ್ದಾರೆ.

ಕಾಶಿ ಮತ್ತು ಮಥುರಾದಲ್ಲಿ ಮಸೀದಿಯಿರಬೇಕಾ? ಮಂದಿರ ಇರಬೇಕಾ? ಎಂಬುದನ್ನು ಸಮಾಜ ನಿರ್ಧರಿಸುತ್ತದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ಅವರು ತಿಳಿಸಿದ್ದಾರೆ.

Join Whatsapp