ಮುಖ್ಯ ಚುನಾವಣಾ ಆಯುಕ್ತರಾಗಿ ರಾಜೀವ್ ಕುಮಾರ್ ನೇಮಕ

Prasthutha|

ನವದೆಹಲಿ : ಮುಂದಿನ ಚುನಾವಣಾ ಆಯುಕ್ತರ ಸ್ಥಾನಕ್ಕೆ ಹಣಕಾಸು ಇಲಾಖೆಯ ನಿವೃತ್ತ ಕಾರ್ಯದರ್ಶಿ ರಾಜೀವ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ. ಅಶೋಕ್ ಲಾವಸ ಅವರಿಂದ ತೆರವಾದ ಸ್ಥಾನವನ್ನು ಸೆ.1ರಿಂದ ರಾಜೀವ್ ಕುಮಾರ್ ತುಂಬಲಿದ್ದಾರೆ.
ಜಾರ್ಖಂಡ್ ನ 1984ರ ಬ್ಯಾಚ್ ನ ನಿವೃತ್ತ ಐಎಎಸ್ ಅಧಿಕಾರಿ ರಾಜೀವ್ ಕುಮಾರ್ ಅವರನ್ನು ಚುನಾವಣಾ ಆಯುಕ್ತರನ್ನಾಗಿ ನೇಮಕ ಮಾಡಲಾಗಿದೆ. ಹಾಲಿ ಆಯುಕ್ತರ ಅವಧಿ ಆ.31ಕ್ಕೆ ಕೊನೆಗೊಳ್ಳಲಿದೆ. ಸೆ.1ರಿಂದ ರಾಜೀವ್ ಕುಮಾರ್ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಕಾನೂನು ಸಚಿವಾಲಯದ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ರಾಜೀವ್ ಕುಮಾರ್ ಅವರು ಪ್ರಸ್ತುತ ಸಾರ್ವಜನಿಕ ಉದ್ಯಮಗಳ ಆಯ್ಕೆ ಮಂಡಳಿಯ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇದಕ್ಕೂ ಮೊದಲು 2017-2020ರ ಅವಧಿಯಲ್ಲಿ ಹಣಕಾಸು ಇಲಾಖೆಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಚುನಾವಣಾ ಆಯುಕ್ತರಾಗಿ ಐದು ವರ್ಷ ಅಧಿಕಾರ ಹೊಂದಿರಲಿದ್ದು, 2025ಕ್ಕೆ ನಿವೃತ್ತಿ ಹೊಂದಲಿದ್ದಾರೆ. 2024ರ ಲೋಕಸಭಾ ಚುನಾವಣೆ ರಾಜೀವ್ ಕುಮಾರ್ ಅವರ ನೇತೃತ್ವದಲ್ಲಿ ನಡೆಯುವ ಸಾಧ್ಯತೆಯಿದೆ.

Join Whatsapp