ಮೆಹ್ಬೂಬ ಮುಫ್ತಿ ಬಿಡುಗಡೆ

Prasthutha|

ಹೊಸದಿಲ್ಲಿ: ಕಾಶ್ಮೀರದಲ್ಲಿ 370ನೆ ವಿಧಿಯನ್ನು ರದ್ದುಗೊಳಿಸಿದ ಬಳಿಕ 14 ತಿಂಗಳುಗಳಿಂದ ಬಂಧನಕ್ಕೊಳಗಾಗಿದ್ದ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹ್ಬೂಬ ಮುಫ಼್ತಿಯವರನ್ನು ಬಿಡುಗಡೆಗೊಳಿಸಲಾಗಿದೆ.

ಅವರನ್ನು ಸಾರ್ವಜನಿಕ ಸುರಕ್ಷತೆ ಕಾಯ್ದೆ (ಪಿ.ಎಸ್.ಎ) ಅಡಿ ಬಂಧಿಸಲಾಗಿತ್ತು.

- Advertisement -

“ಮೆಹ್ಬೂಬ ಮುಫ಼್ತಿಯವರನ್ನು ಬಿಡುಗಡೆಗೊಳಿಸಲಾಗುತ್ತಿದೆ” ಎಂದು ಜಮ್ಮು ಕಾಶ್ಮೀರ ಪ್ರಧಾನ ಕಾರ್ಯದರ್ಶಿ ರೋಹಿತ್ ಕನ್ಸಾಲ ರಾತ್ರಿ 9.17 ರ ಸಮಯಕ್ಕೆ ಟ್ವೀಟ್ ಮಾಡಿದ್ದಾರೆ.

ಸುಪ್ರೀಂ ಕೋರ್ಟ್ ನೀಡಿದ ಗಡುವು ಕೊನೆಗೊಳ್ಳುತ್ತಿರುವಂತೆ ಅವರನ್ನು ಬಿಡುಗಡೆಗೊಳಿಸಲಾಗಿದೆ. ಅಕ್ರಮ ಬಂಧನವನ್ನು  ಪ್ರಶ್ನಿಸಿ ಅವರ ಪುತ್ರಿ ಇಲ್ತಿಜಾ ಮುಫ್ತಿ ಸುಪ್ರೀಂ ಕೋರ್ಟ್ ನಲ್ಲಿ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಸಲ್ಲಿಸಿದ್ದರು. 

ಸೆ.29ರಂದು ಪ್ರಕರಣದ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ‘ಎಲ್ಲಿಯವರೆಗೆ ಮುಫ಼್ತಿಯವರನ್ನು ಬಂಧನದಲ್ಲಿಡಲಾಗುವುದು?’ ಎಂದು ಕೇಂದ್ರ ಮತ್ತು ಜಮ್ಮು-ಕಾಶ್ಮೀರ ಸರಕಾರವನ್ನು ಪ್ರಶ್ನಿಸಿತ್ತು. ಅ.14ರೊಳಗೆ ಉತ್ತರಿಸುವಂತೆ ಕೋರ್ಟ್ ಆದೇಶಿಸಿತ್ತು.


- Advertisement -