February 15, 2021

ರಾಜೀನಾಮೆ ನೀಡಿ ರಾಜ್ಯದ ಮಾನ ಕಾಪಾಡಿ । ಯಡಿಯೂರಪ್ಪರಿಗೆ ಸುರ್ಜೇವಾಲಾ ಟಾಂಗ್

ಯಡಿಯೂರಪ್ಪ ಮತ್ತು ಯತ್ನಾಳ್ ನಡುವೆ ಶೀತಲ ಸಮರ ನಡೆಯುತ್ತಿದೆ. ಇದನ್ನು ಆಕ್ಷೇಪಿಸಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ, ನಿಮಗೆ ರಾಜ್ಯದ ಹಿತಾಸಕ್ತಿ ಕುರಿತು ಕಾಳಜಿಯಿದ್ದರೆ ದಯವಿಟ್ಟು ರಾಜೀನಾಮೆ ನೀಡಿ ರಾಜ್ಯದ ಮಾನ ಕಾಪಾಡಿ ಎಂದು ಹೇಳಿದ್ದಾರೆ.

IAS ಅಧಿಕಾರಿಗಳ ವರ್ಗಾವಣೆಯಲ್ಲಿ ಭ್ರಷ್ಟಾಚಾರವಾಗಿದೆ ಎಂದ ಬಿಜೆಪಿ ಶಾಸಕ ಬಸವಗೌಡ ಯತ್ನಾಳ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಅವರು, “ನಿಮ್ಮದೇ ಪಕ್ಷದ ಶಾಸಕ, 42 IAS ಅಧಿಕಾರಗಳ ವರ್ಗಾವಣೆಯಲ್ಲಿ ಕೋಟ್ಯಂತರ ರೂ.ಗಳ ಹೋಲ್ ಸೇಲ್ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದ್ದಾರೆ. ಇಂತಹ ಆರೋಪಗಳು ಪ್ರತಿದಿನ ನಿಮ್ಮ ಸರ್ಕಾರದ ವಿರುದ್ದ ಕೇಳಿಬರುತ್ತಲೇ ಇವೆ. ನಿಮಗೆ ರಾಜ್ಯದ ಹಿತಾಸಕ್ತಿಯ ಕುರಿತು ಕಾಳಜಿ ಇದ್ದರೆ, ದಯಮಾಡಿ ರಾಜೀನಾಮೆ ನೀಡಿ ರಾಜ್ಯದ ಮಾನ ಉಳಿಸಿ.” ಎಂದು ಟ್ವೀಟ್ ಮಾಡಿದ್ದಾರೆ.

ಶೋಷಿತ, ದಮನಿತ ಸಮುದಾಯಗಳ ಧ್ವನಿಯಾಗಿರುವ ಮತ್ತು ಜನಸಾಮಾನ್ಯರ ಸಮಸ್ಯೆಗಳಿಗೆ ಸದಾ ಮಿಡಿಯುವ ಪ್ರಸ್ತುತ ಪಾಕ್ಷಿಕಕ್ಕೆ ಚಂದಾದಾರಾಗಿರಿ. ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ