February 23, 2021

ರಾಜ್ಯಕ್ಕೆ ಬಂದ ನಂತರ ತಕ್ಕ ಪ್ರತ್ಯುತ್ತರ : ಕಾಂಗ್ರೆಸ್ ನ ಬಿ ಟೀಂ ಎಂದ ಸಚಿವರಿಗೆ ಯತ್ನಾಳ್ ತಿರುಗೇಟು

ಹೊಸದಿಲ್ಲಿ : ವಿಜಾಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‍ ಅವರು ತಾವು ಕಾಂಗ್ರೆಸ್ ನ ಬಿ ಟೀಂ ಎಂದ ಸಚಿವ ಮುರುಗೇಶ್.ಆರ್ ನಿರಾಣಿ ಅವರಿಗೆ  “ನಾನು ಕರ್ನಾಟಕಕ್ಕೆ ಹಿಂದಿರುಗಿದ ನಂತರ ಅವರಿಗೆ ತಕ್ಕ ಪ್ರತ್ಯುತ್ತರ ನೀಡುತ್ತೇನೆ” ಎಂದು ಹೇಳುವ ಮೂಲಕ ತಿರುಗೇಟು ನೀಡಿದ್ದಾರೆ.

ಕಾಂಗ್ರೆಸ್‍ನ ಬಿ ಟೀಮ್‍ನಂತೆ ಕೆಲಸ ಮಾಡುತ್ತಿರುವ ಬಸನಗೌಡ ಪಾಟೀಲ್ ಯತ್ನಾಳ್‍ಗೆ ತಾಕತ್ತಿದ್ದರೆ, ಮೊದಲು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಪಕ್ಷೇತರ ಶಾಸಕನಾಗಿ ಗೆದ್ದು ಬರಲಿ ಎಂದು ನಿನ್ನೆ ಮುರುಗೇಶ್ ನಿರಾಣಿ ಅವರು ಬಹಿರಂಗ ಸವಾಲು ಹಾಕಿದ್ದರು.

“ಕರ್ನಾಟಕದ ಇಬ್ಬರು ಸಚಿವರು ನನ್ನ ಮತ್ತು ನನ್ನ ಸಮುದಾಯದ ಮಠಾಧೀಶರ ವಿರುದ್ಧ ಮಾತನಾಡಿದ್ದಾರೆ ಎಂಬುದು ನನ್ನ ಗಮನಕ್ಕೆ ಬಂದಿದೆ. ನಾನು ರಾಜ್ಯಕ್ಕೆ ಮರಳಿದ ನಂತರ ಅವರ ಆರೋಪಗಳಿಗೆ ಉತ್ತರಿಸುತ್ತೇನೆ” ಎಂದು ಯತ್ನಾಳ್ ದೆಹಲಿಯಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಇದೇ ವೇಳೆ ತಮ್ಮ ದೆಹಲಿ ಭೇಟಿ ಬಗ್ಗೆ ಪ್ರತಿಕ್ರಿಯಿಸಿದ ಯತ್ನಾಳ್, “ಪಕ್ಷದ ಹೈಕಮಾಂಡ್ ನನಗೆ ಬುಲಾವ್ ನೀಡಿಲ್ಲ ಮತ್ತು ನಾನು ಅವರ ಭೇಟಿಗೆ ಯಾವುದೇ ಸಮಯ ಕೋರಿಲ್ಲ. ಶ್ರೀ ಸಿದ್ದೇಶ್ವರ ಸಂಸ್ಥೆಯ ಸಿಬಿಎಸ್‌ಇ ಶಾಲೆಗಳಲ್ಲಿ ಒಂದನ್ನು ನೋಂದಾಯಿಸಲು ನಾನು ದೆಹಲಿಗೆ ಬಂದಿದ್ದೇನೆ” ಎಂದು ಹೇಳಿದ್ದಾರೆ.

ಶೋಷಿತ, ದಮನಿತ ಸಮುದಾಯಗಳ ಧ್ವನಿಯಾಗಿರುವ ಮತ್ತು ಜನಸಾಮಾನ್ಯರ ಸಮಸ್ಯೆಗಳಿಗೆ ಸದಾ ಮಿಡಿಯುವ ಪ್ರಸ್ತುತ ಪಾಕ್ಷಿಕಕ್ಕೆ ಚಂದಾದಾರಾಗಿರಿ. ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ