ರಾಜ್ಯದಲ್ಲಿ ಕುಗ್ಗುತ್ತಿರುವ ಬಿಜೆಪಿ ವರ್ಚಸ್ಸು | ಸಿಎಂ ತವರಲ್ಲೇ ಬಿಜೆಪಿಗೆ ಮುಖಭಂಗ

Prasthutha: April 30, 2021

ಶಿವಮೊಗ್ಗ : ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ತವರು ಶಿವಮೊಗ್ಗ ಜಿಲ್ಲೆಯ ಎರಡು ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿಗೆ ತೀವ್ರ  ಮುಖಭಂಗವಾಗಿದೆ. ಎರಡು ಕಡೆ ಕಾಂಗ್ರೆಸ್ ಅಧಿಕ್ಕಾರಕ್ಕೇರಿದ್ದು, ಕಾರ್ಯಕರ್ತರ ಉತ್ಸಾಹ ಹೆಚ್ಚಿಸಿದೆ.

ಭದ್ರಾವತಿ ನಗರಸಭೆಯ 35 ಸ್ಥಾನಗಳ ಪೈಕಿ ಕಾಂಗ್ರೆಸ್ 18 ಕಡೆ ಗೆಲುವು ಸಾಧಿಸಿದೆ. ಜೆಡಿಎಸ್ 11 ಸ್ಥಾನ, ಬಿಜೆಪಿ 4 ಮತ್ತು ಪಕ್ಷೇತರ ಅಭ್ಯರ್ಥಿ ಒಂದು ಸ್ಥಾನದಲ್ಲಿ ಗೆಲುವು ಕಂಡಿದ್ದಾರೆ. ಅಭ್ಯರ್ಥಿಯೊಬ್ಬರ ನಿಧನದಿಂದಾಗಿ ಒಂದು ವಾರ್ಡಿನ ಚುನಾವಣೆ ಮುಂದೂಡಲಾಗಿದೆ

ಸಿಎಂ ತವರಲ್ಲೇ ಬಿಜೆಪಿಗೆ ಮುಖಭಂಗ

ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಪ್ರಭಾವಿ ಸಚಿವ, ಶಾಸಕರಿರುವ ಜಿಲ್ಲೆಯಲ್ಲಿ ಬಿಜೆಪಿಗೆ ತೀವ್ರ ಮುಖಭಂಗವಾಗಿದೆ. ಸಂಸದ ರಾಘವೇಂದ್ರ, ಸಚಿವ ಈಶ್ವರಪ್ಪ, ಪ್ರಭಾವಿ ಶಾಸಕರೆಲ್ಲ ಭದ್ರಾವತಿಯಲ್ಲಿ ಪ್ರಚಾರ ನಡೆಸಿದ್ದರು. ಭದ್ರಾವತಿಯಲ್ಲಿ ಗೆದ್ದೇ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದರು. ಆದರೆ ಮತದಾರ ಪ್ರಭುಗಳು ಬಿಜೆಪಿಯ ಆಡಳಿತದಿಂದ ರೋಸಿ ಪರ್ಯಾಯ ಪಕ್ಷಗಳತ್ತ ಒಲವು ತೋರಿಸುತ್ತಿದ್ದಾರೆ

ಜೈ ಶ್ರೀರಾಮ್ ಘೋಷಣೆ ವಿವಾದ

ಕಬ್ಬಡ್ಡಿ ಪಂದ್ಯಾವಳಿ ವೇಳೆ ಜೈ ಶ್ರೀರಾಮ್ ಘೋಷಣೆ ಕೂಗಿದ್ದಕ್ಕೆ ಹಲ್ಲೆ ನಡೆಸಿದ ಪ್ರಕರಣ ಭದ್ರಾವತಿಯಲ್ಲಿ ಭಾರಿ ಸದ್ದು ಮಾಡಿತ್ತು. ಈ ಘಟನೆ ಸಂಬಂಧ ಶಾಸಕ ಬಿ.ಕೆ ಸಂಗಮೇಶ್ವರ್ ಮತ್ತು ಅವರ ಕುಟುಂಬದವರ ವಿರುದ್ಧ ಪ್ರಕರಣ ದಾಖಲಿಸಿದ್ದರು. ಇದನ್ನೇ ಬಿಜೆಪಿಯು ರಾಜಕೀಯಗೊಳಿಸಿ ಮತವಾಗಿ ಪರಿವರ್ತಿಸುವ ಯೋಜನೆ ಹಾಕಿಕೊಂಡ್ಡಿದ್ದರು. ಇದು ಬಿಜೆಪಿಗೆ ಅಧಿಕ ಮತ ನೀಡಲಿದೆ ಎಂದು ಬಿಜೆಪಿ ಮುಖಂಡರು ನಂಬಿಕೊಂಡಿದ್ದರು. ಆದರೆ ಭದ್ರಾವತಿ ಮತದಾರರು ಬಿಜೆಪಿಯನ್ನು ತೊರೆದು ಕಾಂಗ್ರೆಸ್ ಕೈ ಹಿಡಿದಿದ್ದಾರೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!