ರಾಜ್ಯದಲ್ಲಿ ಮತ್ತೆ ಸಿಡಿ ಬಾಂಬ್ । ರಮೇಶ್ ಜಾರಕಿಹೊಳಿ ರಾಸಲೀಲೆ ವೀಡಿಯೋ ಲೀಕ್!

Prasthutha: March 2, 2021

ಬೆಂಗಳೂರು : ಬಿಜೆಪಿ ಪಕ್ಷದ ಮುಖಂಡ ಮತ್ತು ರಾಜ್ಯ ಸಚಿವರಾಗಿರುವ ರಮೇಶ್ ಜಾರಕಿಹೊಳೆಯವರ ವೀಡಿಯೋ ಸಿಡಿಯನ್ನು ನಾಗರಿಕ ಹಕ್ಕು ಹೋರಾಟ ಸಮಿತಿಯ ಅಧ್ಯಕ್ಷ  ದಿನೇಶ್ ಕಲ್ಲಹಳ್ಳಿ ಯವರು ಬೆಂಗಳೂರು ಪೊಲೀಸ್ ವರಿಷ್ಠಾಧಿಕಾರಿಯವರಿಗೆ ಹಸ್ತಾಂತರಿಸಿದ್ದಾರೆ.

ವೀಡಿಯೋದಲ್ಲಿ ಬಿಜೆಪಿ ಮುಖಂಡ ಜಾರಕಿಹೊಳೆ ಯುವತಿಯೊಂದಿಗೆ ಅರೆನಗ್ನ ಸ್ಥಿತಿಯಲ್ಲಿ ಮಂಚಹಂಚಿಕೊಂಡಿದ್ದಾರೆ. ಕೆಲಸಕ್ಕಾಗಿ ಬಂದ ಯುವತಿಯನ್ನು ರಮೇಶ್ ತನ್ನ ಕಾಮತೀಟೆ ತೀರಿಸಲು ಬಳಸಿಕೊಂಡಿದ್ದಾರೆ ಎಂದು ದಿನೇಶ್ ಕಲ್ಲಹಳ್ಳಿ ಆರೋಪಿಸಿದ್ದಾರೆ.

ಸಿಡಿ ಹಸ್ತಾಂತರ ಬಳಿಕ ಮಾಧ್ಯಮಗಳೊಂದಿಗೆ ಮಾತಾಡಿದ ದಿನೇಶ್ “ಈ  ಕುರಿತು ಸಮರ್ಪಕ ತನಿಖೆ ನಡೆಸಬೇಕೆಂದು ಬೆಂಗಳೂರು ಪೊಲೀಸ್ ವರಿಷ್ಠಾಧಿಕಾರಿಗೆ ಒತ್ತಾಯಿಸಿದ್ದೇನೆ “ಎಂದು ಹೇಳಿದರು

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!