ರಾಜ್ಯೋತ್ಸವ ಪ್ರಯುಕ್ತ ‘ಪ್ರಸ್ತುತ’ ಓದುಗರ ವೇದಿಕೆಯಿಂದ ಕವನ ಸ್ಪರ್ಧೆ: ನಾಳೆ ವಿಜೇತರಿಗೆ ಪ್ರಶಸ್ತಿ ವಿತರಣೆ

Prasthutha: December 1, 2020

ಮಂಗಳೂರು: ‘ಪ್ರಸ್ತುತ ಓದುಗರ ವೇದಿಕೆ, ಜುಬೈಲ್, ಸೌದಿ ಅರೇಬಿಯಾ ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಆಯೋಜಿಸಿದ್ದ ಕವನ ಸ್ಪರ್ಧೆಯ ವಿಜೇತರಿಗೆ ಪ್ರಶಸ್ತಿ ವಿತರಣೆ ಕಾರ್ಯಕ್ರಮ ಮಂಗಳೂರಿನಲ್ಲಿ ನಾಳೆ (ಡಿ.2) ನಡೆಯಲಿದೆ.

ಕಾರ್ಯಕ್ರಮವು ಬೆಳಗ್ಗೆ 10.00 ಗಂಟೆಗೆ ‘ಪ್ರಸ್ತುತ’ ಯೂಟ್ಯೂಬ್ ಚಾನೆಲ್ ನಲ್ಲಿ ನೇರಪ್ರಸಾರಗೊಳ್ಳಲಿದೆ. ಕಾರ್ಯಕ್ರಮದಲ್ಲಿ ಪ್ರಸ್ತುತ ಸಂಪಾದಕೀಯ ಮಂಡಳಿ ಸದಸ್ಯೆ ಶಾಹಿದಾ ಅಸ್ಲಂ, ಪ್ರಸ್ತುತ ಓದುಗರ ವೇದಿಕೆ ಜುಬೈಲ್ ಇದರ ಅಧ್ಯಕ್ಷ ಮುಹಮ್ಮದ್ ಇಕ್ಬಾಲ್, ಸಂಪಾದಕ ಝಿಯಾವುಲ್ ಹಕ್ ಹಾಗೂ ಇತರ ಗಣ್ಯರು ಭಾಗವಹಿಸಲಿದ್ದಾರೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!