ರಾಷ್ಟ್ರೀಯ ಹೆದ್ದಾರಿ ಅವ್ಯವಸ್ಥೆ: ಮೆಲ್ಕಾರ್, ಕಲ್ಲಡ್ಕದಲ್ಲಿ ಎಸ್.ಡಿ.ಪಿ.ಐ ಪ್ರತಿಭಟನೆ

➤ ಪ್ರತಿಭಟನಾಕಾರರಿಂದ ಅಣಕು ಪ್ರದರ್ಶನ, ರಸ್ತೆತಡೆ

ಬಂಟ್ವಾಳ:- ರಾಷ್ಟ್ರೀಯ ಹೆದ್ದಾರಿಯ ಅವ್ಯವಸ್ಥೆಯನ್ನು ಖಂಡಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ವತಿಯಿಂದ ಮೆಲ್ಕಾರ್ ಮತ್ತು ಕಲ್ಲಡ್ಕಗಳಲ್ಲಿ ಪ್ರತಿಭಟನೆ ನಡೆಸಲಾಯಿತು.

- Advertisement -

ಪ್ರತಿಭಟನಾಕಾರರು ಅಣಕು ಪ್ರದರ್ಶನ ಮತ್ತು ರಸ್ತೆ ತಡೆಗಳನ್ನು ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಮೆಲ್ಕಾರ್ ನಲ್ಲಿ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಎಸ್ ಡಿಪಿಐ ರಾಜ್ಯಾಧ್ಯಕ್ಷ ಇಲ್ಯಾಸ್ ಮುಹಮ್ಮದ್ ತುಂಬೆ ಮಾತಾಡಿ ಭ್ರಷ್ಟಾಚಾರ ದಲ್ಲಿ ಮುಳುಗಿದ ರಾಜ್ಯ ಬಿಜೆಪಿ ಸರಕಾರ ಜನರ ಸಮಸ್ಯೆಗಳನ್ನು ಆಲಿಸುವ ಪ್ರಯತ್ನ ಮಾಡದೆ ಜನರ ಹಕ್ಕನ್ನು ಹತ್ತಿಕುವ ಪ್ರಯತ್ನಕ್ಕೆ ಕೈ ಹಾಕಿದೆ ಎಂದರು.

ಎಸ್ ಡಿ ಪಿ ಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಾಹುಲ್ ಎಸ್.ಎಚ್ ಮಾತಾಡಿ ಈ ಪ್ರತಿಭಟನೆಯು ಕೇವಲ ಸಾಂಕೇತಿಕವಾದ ಪ್ರತಿಭಟನೆ. ಮುಂದಿನ ದಿನಗಳಲ್ಲಿ ಹೆದ್ದಾರಿಯನ್ನು ಸರಿಪಡಿಸದಿದ್ದಲ್ಲಿ ಎಂಟು ವಿಧಾನಸಭಾಕ್ಷೇತ್ರಗಳಲ್ಲಿ  ಎಲ್ಲಾ ಸಮಾನ ಮನಸ್ಕ ಸಂಘಟನೆ ಮತ್ತು ಪಕ್ಷಗಳನ್ನು ಸೇರಿಸಿ ರಾಸ್ತಾ ರೋಖೋ ನಡೆಸಿ ಪ್ರತಿಭಟಿಸಲಿದ್ದೇವೆ ಎಂದು ಎಚ್ಚರಿಸಿದರು. ಕಲ್ಲಡ್ಕದಲ್ಲಿ ಜಿಲ್ಲಾ ಕಾರ್ಯದರ್ಶಿ ಇಕ್ಬಾಲ್ ಬೆಳ್ಳಾರೆ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದರು. ಝಕರಿಯಾ ಗೋಳ್ತಮಜಲು, ಮುಹಮ್ಮದ್ ಶಾಕೀರ್ ಮತ್ತು ಇತರ ಸ್ಥಳೀಯ ನಾಯಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

- Advertisement -