ರಾಸಲೀಲೆ CD | ಜಾರಕಿಹೊಳಿ ನಿರ್ದೋಷಿ ಎಂದ ವಾಲ್ಮೀಕಿ ಶ್ರೀ
Prasthutha: March 4, 2021

ದಾವಣಗೆರೆ: ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿ ರಾಜೀನಾಮೆ ನೀಡಿರುವ ರಮೇಶ್ ಜಾರಕಿಹೊಳಿ ಅವರನ್ನು ಪುನಃ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಬೇಕು ಎಂದು ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಆಗ್ರಹಿಸಿದ್ದಾರೆ.
“ರಮೇಶ್ ಜಾರಕಿಹೊಳಿ ತಪ್ಪು ಮಾಡಲಿಲ್ಲ. ಆರೋಪದ ಹಿನ್ನೆಲೆಯಲ್ಲಿ ಅವರು ನೈತಿಕ ಹೊಣೆಹೊತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆದರೆ ತರಾತುರಿಯಲ್ಲಿ ಅವರ ರಾಜೀನಾಮೆ ಅಂಗೀಕರಿಸಿರುವುದು ಸರಿಯಲ್ಲ ಎಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸ್ವಾಮೀಜಿ ಹೇಳಿದ್ದಾರೆ.
ಬಿಜೆಪಿ ಸರ್ಕಾರ ಅಸ್ಥಿತ್ವಕ್ಕೆ ಬರಲು ರಮೇಶ್ ಜಾರಕಿಹೊಳಿ ಬಹಳ ಪ್ರಮುಖ ಪಾತ್ರ ವಹಿಸಿದ್ದಾರೆ. ಅವರನ್ನು ಸಂಪುಟದಲ್ಲಿ ಉಳಿಸಿಕೊಂಡೇ ತನಿಖೆ ನಡೆಸಬಹುದಿತ್ತು. ಆದರೆ ರಾಜೀನಾಮೆ ಅಂಗೀಕರಿಸಲಾಗಿದೆ. ಹೀಗಾಗಿ ಅವರನ್ನು ತಕ್ಷಣ ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.
