December 5, 2020

ಲವ್ ಜಿಹಾದ್ ನಿಗ್ರಹ, ಗೋಹತ್ಯೆ ನಿಷೇಧಕ್ಕೆ ಬಿಜೆಪಿ ಉನ್ನತ ಸಮಿತಿ ನಿರ್ಧಾರ:

ಬೆಳಗಾವಿ: ಲವ್ ಜಿಹಾದ್ ಗೆ ತಡೆ ಮತ್ತು ಗೋಹತ್ಯೆ ನಿಷೇಧಕ್ಕೆ ಸಂಬಂಧಿಸಿ ಬಿಜೆಪಿ ಉನ್ನತ ಸಮಿತಿ ನಿರ್ಧರಿಸಿದ್ದು, ಮುಂದಿನ ನಿರ್ಣಯವನ್ನು ಸರ್ಕಾರ ತೆಗೆದುಕೊಳ್ಳಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, “ಪ್ರೇಮದ ಹೆಸರಿನಲ್ಲಿ ಮತಾಂತರ ನಡೆದ ಬಹಳಷ್ಟು ಪ್ರಕರಣಗಳು ವರದಿಯಾಗಿವೆ. ರಾಜ್ಯದಲ್ಲಿ ಲವ್ ಜಿಹಾದ್ ಎನ್ನುವುದು ಬಹಳ ಆತಂಕಕಾರಿ ವಿಷಯ. ಹೀಗಾಗಿ ಈ ಕುರಿತು ಬಹಳ ಗಂಭೀರವಾಗಿದ್ದೇವೆ” ಎಂದು ಹೇಳಿದ್ದಾರೆ.

ಗಾಂಧಿ ಭವನದಲ್ಲಿ ನಡೆದ ಬಿಜೆಪಿ ರಾಜ್ಯ ಕಾರ್ಯಕಾರಿಣಿಯಲ್ಲಿ ಪಕ್ಷದ ಉಸ್ತುವಾರಿ ಅರುಣ್ ಸಿಂಗ್, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಅರವಿಂದ ಲಿಂಬಾವಳಿ, ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳಬಮತ್ತಿತರರು ಉಪಸ್ಥಿತರಿದ್ದರು.

ಟಾಪ್ ಸುದ್ದಿಗಳು

ವಿಶೇಷ ವರದಿ