ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ | ಮುಖ್ಯೋಪಾಧ್ಯಾಯನ ಬಂಧನ

Prasthutha|

ತೆಲಂಗಾಣ: 7 ರಿಂದ 11 ವರ್ಷದೊಳಗಿನ ಐದು ಬಾಲಕಿಯರ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ ಭದ್ರಾಡ್ರಿ ಕೊಥಗುಡೆಮ್ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯನನ್ನು ಬಂಧಿಸಿದ್ದು ವರದಿಯಾಗಿದೆ.

ಅಸ್ವಸ್ಥಳಾಗಿದ್ದ ಬಾಲಕಿಯೋರ್ವಳನ್ನು ಆಸ್ಪತ್ರೆಗೆ ದಾಖಲಿಸಿದಾಗ ನಿಜಾಂಶ ಬೆಳಕಿಗೆ ಬಂದಿದೆ.  ಬಳಿಕ ಎಲ್ಲಾ ವಿದ್ಯಾರ್ಥಿನಿಯರನ್ನು ವಿಚಾರಿಸಿದಾಗ, ಮುಖ್ಯೋಪಾಧ್ಯಾಯರು ಅಶ್ಲೀಲ ವಿಡಿಯೋಗಳನ್ನು ತೋರಿಸಿ ತಮ್ಮ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದು, ಈ ಬಗ್ಗೆ ಯಾರೊಂದಿಗೂ ಹೇಳದಂತೆ ಬೆದರಿಕೆ ಹಾಕಿದ್ದ ಎಂದು ಆರೋಪಿಸಿದ್ದಾರೆ.

- Advertisement -

ಆರೋಪಿಯ ವಿರುದ್ಧ ಐಪಿಸಿ ಸೆಕ್ಷನ್ 376 ಮತ್ತು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

- Advertisement -