ವಿಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿ ಯಶವಂತ್ ಸಿನ್ಹಾ ಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ ಸಮಾಜವಾದಿ ಪಕ್ಷ

Prasthutha|

ಲಖನೌ: ಮುಂಬರುವ ರಾಷ್ಟ್ರಪತಿ ಚುನಾವಣೆಯಲ್ಲಿ ವಿಪಕ್ಷಗಳು ಸೂಚಿಸಿ ಆಯ್ಕೆ ಮಾಡಿದ ಮಾಜಿ ಕೇಂದ್ರ ಸಚಿವ ಯಶವಂತ್ ಸಿನ್ಹಾ ಅವರಿಗೆ ಸಂಪೂರ್ಣ ಬೆಂಬಲ ನೀಡಲಾಗುವುದು ಎಂದು ಸಮಾಜವಾದಿ ಪಕ್ಷ (ಎಸ್‌ಪಿ) ಹೇಳಿದೆ.

- Advertisement -

ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಎಲ್ಲಾ ಪಕ್ಷದ ಸಂಸದರು ಮತ್ತು ಶಾಸಕರ ಸಭೆಯನ್ನುದ್ದೇಶಿಸಿ ಈ ಬಗ್ಗೆ ಚರ್ಚಿಸಿ, ಸಿನ್ಹಾ ಅವರ ಹೆಸರನ್ನು ರಾಷ್ಟ್ರಪತಿ ಸ್ಥಾನಕ್ಕೆ ಪ್ರಸ್ತಾಪಿಸಿ ಬೆಂಬಲಿಸುವ ಮೂಲಕ ಸಹಿ ಹಾಕಿದರು.

ಯಶವಂತ್ ಸಿನ್ಹಾ ಅವರು ವಿರೋಧ ಪಕ್ಷದ ಒಮ್ಮತದ ಅಭ್ಯರ್ಥಿಯಾಗಿರುವುದರಿಂದ ಸಮಾಜವಾದಿ ಪಕ್ಷದ ಎಲ್ಲಾ ಸಂಸದರು ಮತ್ತು ಶಾಸಕರು ಒಮ್ಮತದಿಂದ ಬೆಂಬಲಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

Join Whatsapp