ಶಾಲಾರಂಭ ದಿನಾಂಕ ಘೋಷಣೆ ಬೆನ್ನಲ್ಲೇ ವಿದ್ಯಾರ್ಥಿಗಳ ಪೋಷಕರಿಂದ ಪ್ರತಿಭಟನೆಗೆ ಕರೆ

Prasthutha|

ಬೆಂಗಳೂರು: ರಾಜ್ಯದಲ್ಲಿ ಶಾಲಾರಂಭಕ್ಕೆ ರಾಜ್ಯ ಸರಕಾರ ದಿನಾಂಕ ಘೋಷಿಸಿದ್ದ ಬೆನ್ನಲ್ಲೇ, ಖಾಸಗಿ ಶಾಲೆಗಳು ಫೀಸ್ ಬಗ್ಗೆ ಸ್ಪಷ್ಟನೆ ನೀಡದ ಹಿನ್ನೆಲೆಯಲ್ಲಿ ನಾಳೆ ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿ ವಿದ್ಯಾರ್ಥಿಗಳ ಪೋಷಕರು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.

ರಾಜ್ಯ ಸರಕಾರ ಶಾಲಾರಂಭಕ್ಕೆ ದಿನಾಂಕ ನಿಗದಿ ಮಾಡಿದ್ದು, ಜನವರಿ 1ರಿಂದ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯುಸಿ ತರಗತಿಗಳು ಆರಂಭವಾಗಲಿದೆ.

- Advertisement -

ಖಾಸಗಿ ಶಾಲೆಗಳು ಶಾಲಾ ಶುಲ್ಕದ ಬಗ್ಗೆ ಸ್ಪಷ್ಟನೆ ನೀಡದ ಹಿನ್ನೆಲೆಯಲ್ಲಿ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿ ಪೋಷಕರು ಪ್ರತಿಭಟನೆ ನಡೆಸಲಿದ್ದಾರೆ.

ಈ ಹಿಂದೆ ಫ್ರೀಡಂ ಪಾರ್ಕ್ ನಲ್ಲಿ ಪೋಷಕರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದ್ದು, ಮನವಿಗೆ ಸ್ಪಂದಿಸದ ಶಿಕ್ಷಣ ಇಲಾಖೆಯ ವಿರುದ್ಧ ನಾಳೆ ಬೆಳಿಗ್ಗೆಯಿಂದ ಮಧ್ಯಾಹ್ನದ ವರೆಗೆ ಪ್ರತಿಭಟನೆ ನಡೆಸಲಿದ್ದಾರೆ ಎನ್ನಲಾಗಿದೆ.

- Advertisement -