ಸಕಲ ಸರಕಾರಿ ಗೌರವಗಳೊಂದಿಗೆ ಪ್ರಣಬ್ ಮುಖರ್ಜಿ ಅಂತ್ಯ ಸಂಸ್ಕಾರ

Prasthutha|

ನವದೆಹಲಿ : ಅನಾರೋಗ್ಯದ ಹಿನ್ನೆಲೆಯಲ್ಲಿ ನಿನ್ನೆ ಮೃತಪಟ್ಟಿದ್ದ ಮಾಜಿ ರಾಷ್ಟ್ರಪತಿ, ಭಾರತ ರತ್ನ ಪ್ರಣಬ್ ಮುಖರ್ಜಿ ಅವರ ಅಂತ್ಯ ಸಂಸ್ಕಾರ ಇಂದು ದೆಹಲಿಯಲ್ಲಿ ನಡೆಯಿತು. ಮುಖರ್ಜಿ ಅವರ ಪುತ್ರ ಅಭಿಜಿತ್ ಮುಖರ್ಜಿ ತಂದೆಯ ಅಂತಿಮ ವಿಧಿ ವಿಧಾನಗಳನ್ನು ನಿರ್ವಹಿಸಿದರು.

ಕೊರೋನ ಸೋಂಕಿನ ಹಿನ್ನೆಲೆಯಲ್ಲಿ ಅಂತ್ಯ ಸಂಸ್ಕಾರದಲ್ಲಿ ಹೆಚ್ಚಿನ ಜನರು ಭಾಗವಹಿಸಲಿಲ್ಲ. ಸಾಮಾಜಿಕ ಅಂತರ ಕಾಯ್ದುಕೊಂಡು ಅಂತ್ಯ ಸಂಸ್ಕಾರ ವಿಧಿ ವಿಧಾನಗಳನ್ನು ನೆರವೇರಿಸಲಾಯಿತು. ಸಕಲ ಸರಕಾರಿ ಗೌರವದೊಂದಿಗೆ ಪಾರ್ಥೀವ ಶರೀರದ ಅಂತ್ಯ ಸಂಸ್ಕಾರ ನಡೆಸಲಾಯಿತು.

- Advertisement -

ಕೊರೋನ ಸೋಂಕಿನ ಹಿನ್ನೆಲೆಯಲ್ಲಿ ವ್ಯಾನ್ ಮೂಲಕ ಪಾರ್ಥೀವ ಶರೀರ ಕರೆತರಲಾಗಿತ್ತು. ದೆಹಲಿಯ ಲೋಧಿ ರಸ್ತೆಯ ಚಿತಾಗಾರದಲ್ಲಿ ಅಂತ್ಯ ಸಂಸ್ಕಾರ ನಡೆದಿದೆ.

- Advertisement -