ಸಸಿಕಾಂತ್ ಸೆಂಥಿಲ್ ನಾಳೆ‌ ಕಾಂಗ್ರೆಸ್ ಸೇರ್ಪಡೆ

Prasthutha|

ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಸೋಮವಾರ ತಮಿಳುನಾಡಿನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ ಗೆ ಅಧಿಕೃತವಾಗಿ ಸೇರ್ಪಡೆಗೊಳ್ಳಲಿದ್ದಾರೆ.

ಮೂಲತಃ ತಮಿಳುನಾಡಿನವರಾದ ಸಸಿಕಾಂತ್ ಸೆಂಥಿಲ್, ಕರ್ನಾಟಕ ಕೆಡರ್ ಆಗಿ ಕಾರ್ಯನಿರ್ವಹಿಸಿದ್ದರು. ಬಿಜೆಪಿ ಸರಕಾರದ ಜನ ವಿರೋಧಿ ನೀತಿಗಳನ್ನು ಕಟುವಾಗಿ ವಿರೋಧಿಸಿದ್ದ ಅವರು ನಂತರ ತಮ್ಮ ಹುದ್ದೆಗೆ ರಾಜೀನಾಮೆಯನ್ನೂ ನೀಡಿದ್ದರು.

- Advertisement -

ಕೊನೆಯದಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ಕೇಂದ್ರ ಸರಕಾರ ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದುಪಡಿಸಿದ್ದನ್ನು ವಿರೋಧಿಸಿದ್ದ ಅವರು, ತಮ್ಮ ಸಿಎಎ, ಎನ್‌ಆರ್‌ಸಿ ಹೋರಾಟದಲ್ಲಿ ಸಸಿಕಾಂತ್ ಸೆಂಥಿಲ್ ಮುಂಚೂಣಿಯಲ್ಲಿದ್ದರು.

- Advertisement -