ಸಾಂವಿಧಾನಿಕ ಪ್ರಜಾಪ್ರಭುತ್ವದ ಕುಸಿತಕ್ಕೆ ದೇಶವು ಸಾಕ್ಷಿಯಾಗಿದೆ: ರಾಹುಲ್ ಸದಸ್ಯತ್ವ ರದ್ದತಿಗೆ ಮಮತಾ ಬ್ಯಾನರ್ಜಿ ಪ್ರತಿಕ್ರಿಯೆ

Prasthutha|

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸಂಸದ ಸ್ಥಾನದಿಂದ ಅನರ್ಹಗೊಳಿಸಿರುವುದನ್ನು ತೀವ್ರವಾಗಿ ಖಂಡಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಸಾಂವಿಧಾನಿಕ ಪ್ರಜಾಪ್ರಭುತ್ವದ ಕುಸಿತಕ್ಕೆ ದೇಶವು ಸಾಕ್ಷಿಯಾಗಿದೆ ಪ್ರತಿಕ್ರಿಯಿಸಿದ್ದಾರೆ.
“ಪ್ರಧಾನಿ ಮೋದಿಯವರ ನವ ಭಾರತದಲ್ಲಿ, ವಿರೋಧ ಪಕ್ಷದ ನಾಯಕರು ಬಿಜೆಪಿಯ ಪ್ರಧಾನ ಗುರಿಯಾಗಿದ್ದಾರೆ! ಕ್ರಿಮಿನಲ್ ಹಿನ್ನೆಲೆಯುಳ್ಳ ಬಿಜೆಪಿ ನಾಯಕರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲಾಗಿದ್ದರೆ, ಪ್ರತಿಪಕ್ಷ ನಾಯಕರನ್ನು ಅವರ ಭಾಷಣಗಳಿಗಾಗಿ ಅನರ್ಹಗೊಳಿಸಲಾಗುತ್ತದೆ. ಇಂದು, ನಮ್ಮ ಸಾಂವಿಧಾನಿಕ ಪ್ರಜಾಪ್ರಭುತ್ವ ಮತ್ತಷ್ಟು ಕೆಳಮಟ್ಟಕ್ಕೆ ಕುಸಿದಿರುವುದಕ್ಕೆ ನಾವು ಸಾಕ್ಷಿಯಾಗಿದ್ದೇವೆ” ಎಂದು ಬ್ಯಾನರ್ಜಿ ಬರೆದಿದ್ದಾರೆ.

Join Whatsapp