ಸಾವಿನಲ್ಲೂ ಒಂದಾದ ಕರಾವಳಿಯ ಸಹೋದರರು

Prasthutha: June 14, 2021

ಮಂಗಳೂರು : ಸಹೋದರರಿಬ್ಬರು ಒಂದೇ ದಿನದಲ್ಲಿ ಮೃತ ಪಟ್ಟ ಘಟನೆ ಇಂದು ಕಾರ್ಕಳದಲ್ಲಿ ನಡೆದಿದೆ. ಸಾಣೂರು ನಿವಾಸಿ ಮಿಯಾರು ಗುಂಡಾಜೆ ಬಳಿಯ ರಾಜಾರಾಮ ರಾವ್ (55) ಇಂದು ಬೆಳಗ್ಗೆ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಬೆಳಗ್ಗೆ ಮೃತ ಪಟ್ಟರೆ, ಸಹೋದರ ಸಾಣೂರು ಚಿಕ್ಕಬೆಟ್ಟು ನಿವಾಸಿ ಗಣೇಶ್ ರಾವ್ (60) ಸಂಜೆ ಮಣಿಪಾಲ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ.

ರಾಜರಾಮ್ ರಾವ್ ಅವರು ಇತ್ತೀಚೆಗೆ ಅಪಘಾತಕ್ಕೆ ಒಳಗಾಗಿದ್ದು, ಚಿಕಿತ್ಸೆಗಾಗಿ ಕಾರ್ಕಳ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಬೆಳಗ್ಗೆ 11 ಗಂಟೆಯ ಸುಮಾರಿಗೆ ಮೃತಪಟ್ಟಿದ್ದಾರೆ.

ಹಿರಿಯ ಸಹೋದರ ಗಣೇಶ್ ರಾವ್, ಜಾಂಡಿಸ್ ಕಾಯಿಲೆಯಿಂದ ಬಳಲುತಿದ್ದರು. ಇವರು ಚಿಕಿತ್ಸೆಗಾಗಿ ಮಣಿಪಾಲ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೆ ಇಂದು ಸಂಜೆ 5 ಗಂಟೆಯ ಆಸುಪಾಸಿನ ಸಮಯದಲ್ಲಿ ಮೃತಪಟ್ಟಿದ್ದಾರೆ. ಇಬ್ಬರು ಪ್ರತ್ಯೇಕವಾಗಿ ಕುಟುಂಬ ಸದಸ್ಯರ ಜೊತೆ ವಾಸವಿದ್ದರು.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ