ಸಿಎಂಗೆ ಪ್ರತಿಭಟನೆಯ ಸ್ವಾಗತ | ಭೂ ಸುಧಾರಣಾ ಕಾಯ್ದೆ ತಿದ್ದುಪಡಿಗೆ ರೈತರ ಆಕ್ರೋಶ

Prasthutha|

ಬೆಳಗಾವಿ : ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧಿಸಿ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಆಗಮನದ ವೇಳೆ ರೈತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಸಾಂಬ್ರಾ ವಿಮಾನ ನಿಲ್ದಾಣದ ಹೊರಗೆ, ಬೆಳಗಾವಿ-ಬಾಗಲಕೋಟ ಹೆದ್ದಾರಿ ಮೇಲೆ ರೈತರ ಪ್ರತಿಭಟನಾ ಪ್ರದರ್ಶನ ನಡೆಯಿತು.

ಪ್ರವಾಹ ಪೀಡಿತ ಪ್ರದೇಶಗಳ ವೀಕ್ಷಣೆಗಾಗಿ ಯಡಿಯೂರಪ್ಪ ಬೆಳಗಾವಿಗೆ ಆಗಮಿಸಿದ್ದರು. ಈ ವೇಳೆ ರಾಜ್ಯ ರೈತಸಂಘ, ಹಸಿರು ಸೇನೆ ಸೇರಿದಂತೆ ಹಲವು ಸಂಘಟನೆಗಳು ಪ್ರತಿಭಟನೆ ನಡೆಸಿದವು.

- Advertisement -

ಯಾವುದೇ ಕಾರಣಕ್ಕೂ ಸರಕಾರ ಈ ತಿದ್ದುಪಡಿ ಕಾಯ್ದೆ ಜಾರಿಗೆ ತರಬಾರದು. ಇದು ಬಂಡವಾಳಶಾಹಿಗಳಿಗೆ ಅನುಕೂಲಕರವಾಗಿದೆ ಎಂದು ಪ್ರತಿಭಟನಕಾರರು ಆಪಾದಿಸಿದರು. ನಮ್ಮ ಭೂಮಿ – ನಮ್ಮ ಹಕ್ಕು ಎಂದು ರೈತರು ಘೋಷಣೆ ಕೂಗಿದರು.

- Advertisement -