ಸಿಎಎ ವಿರುದ್ಧ ಪ್ರತಿಭಟನೆ: ಎಫ್ಐಆರ್ ರದ್ದುಪಡಿಸಿದ ಮದ್ರಾಸ್ ಹೈಕೋರ್ಟ್

Prasthutha: July 10, 2020

ಚೆನ್ನೈ: ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ವಿರುದ್ಧದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ವ್ಯಕ್ತಿಯೋರ್ವರ ವಿರುದ್ಧ ಸಲ್ಲಿಸಿದ್ದ ಎಫ್ಐಆರ್ ಅನ್ನು ಮದ್ರಾಸ್ ಹೈಕೋರ್ಟ್ ರದ್ದುಪಡಿಸಿದೆ.

ಸಂಬಂಧಪಟ್ಟ ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 143 ಮತ್ತು 188ರ ಅಡಿಯಲ್ಲಿ ಎಫ್ಐಆರ್ ದಾಖಲಿಸಲು ಪೊಲೀಸರಿಗೆ ಅಧಿಕಾರವಿಲ್ಲ ಎಂದು ನ್ಯಾಯಮೂರ್ತಿ ಜಿ.ಕೆ.ಇಲಾಂತಿರಾಯನ್ ಹೇಳಿದ್ದಾರೆ. ಮಾತ್ರವಲ್ಲದೆ, ಆರೋಪಿಗಳ ಪ್ರತಿಭಟನೆ ಹೇಗೆ ಕಾನೂನುಬಾಹಿರ ಎಂದು ನ್ಯಾಯಾಲಯ ಪ್ರಶ್ನಿಸಿದೆ.
ಈ ವರ್ಷದ ಸಿಎಎ ವಿರುದ್ಧ ಜನವರಿ 31ರಂದು ಅನುಮತಿಯಿಲ್ಲದೆ ಸಾರ್ವಜನಿಕ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದ್ದಕ್ಕಾಗಿ ಸ್ಥಳೀಯ ನಿವಾಸಿ ಶಂಸುಲ್ ಹುದಾ ಬಾಖವಿ ವಿರುದ್ಧ ಐಪಿಸಿ ಸೆಕ್ಷನ್ 143 ಮತ್ತು 188ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ತಮ್ಮ ವಿರುದ್ಧದ ಎಫ್ಐಆರ್ ರದ್ದುಗೊಳಿಸುವಂತೆ ಕೋರಿ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು.
ಡಿಸೆಂಬರ್ 11ರಂದು ಸಂಸತ್ತಿನಲ್ಲಿ ಸಿಎಎ ಅಂಗೀಕಾರದ ನಂತರ, ದೇಶಾದ್ಯಂತ ಭಾರಿ ಪ್ರತಿಭಟನೆಗಳು ಭುಗಿಲೆದ್ದವು. ಕೆಲವು ಘಟನೆಗಳನ್ನು ಹೊರತುಪಡಿಸಿ, ಎಲ್ಲಾ ಪ್ರತಿಭಟನೆಗಳು ಶಾಂತಿಯುತವಾಗಿತ್ತು. ಅದಾಗ್ಯೂ, ಅನೇಕ ಸ್ಥಳಗಳಲ್ಲಿ ಸ್ಥಳೀಯ ಅಧಿಕಾರಿಗಳು ಸಿಎಎ ವಿರುದ್ಧ ಪ್ರತಿಭಟಿಸಲು ಜನರಿಗೆ ಅವಕಾಶ ನೀಡಲಿಲ್ಲ. ತಮಿಳುನಾಡು, ಉತ್ತರ ಪ್ರದೇಶ ಮತ್ತು ದೆಹಲಿ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಅನಿರ್ದಿಷ್ಟ ಸಂಖ್ಯೆಯ ಜನರ ವಿರುದ್ಧ ಪ್ರಕರಣ ದಾಖಲಾಗಿದ್ದು, ಅವರಲ್ಲಿ ಅನೇಕರನ್ನು ಜೈಲಿಗೆ ಕಳುಹಿಸಲಾಗಿದೆ.
ಈ ತೀರ್ಪು ಸಿಎಎ ವಿರೋಧಿ ಪ್ರತಿಭಟನಾಕಾರರಿಗೆ ಹಾಗೂ ಅದೇ ಪ್ರಕರಣದಲ್ಲಿ ಬಂಧಿಸಲ್ಪಟ್ಟವರಿಗೆ ಭರವಸೆ ಮೂಡಿಸಿದೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!