ಸಿಬಿಎಸ್​ಇ 12ನೇ ತರಗತಿ ಪರೀಕ್ಷೆ ರದ್ದು

Prasthutha|

ಹೊಸದಿಲ್ಲಿ: ಸಿಬಿಎಸ್​ಇ 12ನೇ ತರಗತಿ ಪರೀಕ್ಷೆಯನ್ನು ರದ್ದುಗೊಳಿಸುವ ನಿರ್ಧಾರವನ್ನು ತೆಗೆದುಕೊಳ್ಳುವ ಮೂಲಕ ಪರೀಕ್ಷೆ ನಡೆಯುತ್ತದೆಯೇ ಇಲ್ಲವೇ ಎನ್ನುವ ಗೊಂದಲಕ್ಕೆ ತೆರೆ ಎಳೆಯಲಾಗಿದೆ.

ಸಿಬಿಎಸ್​ಇ ಪರೀಕ್ಷೆ ಕುರಿತು ಮಂಗಳವಾರದಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಸಲಾಗಿದ್ದು, ಪರೀಕ್ಷೆ ನಡೆಸದೆಯೇ ಇರಲು ಬೇರಾವುದಾದರೂ ಪರ್ಯಾಯ ಮಾರ್ಗಗಳು ಇವೆಯೇ ಎಂಬುದರ ಬಗ್ಗೆ ಪ್ರಧಾನಿ ಚರ್ಚೆ ಮಾಡಿದ್ದಾರೆ.

- Advertisement -

ದೇಶಾದ್ಯಂತ ಕೊರೋನಾ ಅಟ್ಟಹಾಸ ಮೆರೆಯುತ್ತಿರುವ ಹಿನ್ನೆಲೆಯಲ್ಲಿ ಪರೀಕ್ಷೆ ನಡೆಸುವುದು ಸರಿಯಲ್ಲ ಎಂಬ ಅಭಿಪ್ರಾಯ ಸಭೆಯಲ್ಲಿ ಕೇಳಿ ಬಂದಿದೆ. ಸಿಬಿಎಸ್​ಇ ಪರೀಕ್ಷೆಯ ಬಗ್ಗೆ ಈ ಹಿಂದೆ ಸುಪ್ರೀಂ ಕೋರ್ಟ್ ಕೂಡ ಕೇಂದ್ರಕ್ಕೆ ಪ್ರಶ್ನೆ ಕೇಳಿತ್ತು. ಜೂನ್​ 3ರ ಒಳಗೆ ಕೇಂದ್ರ ಸರಕಾರ ಪ್ರತಿಕ್ರಿಯೆ ನೀಡಲು ಸುಪ್ರೀಂ ಕೋರ್ಟ್​ ಆದೇಶಿಸಿತ್ತು. 

- Advertisement -