ಸೈಯದ್ ಇಸಾಕ್ ಗ್ರಂಥಾಲಯಕ್ಕೆ 8243 ಪುಸ್ತಕಗಳ ದಾನ : ಸಚಿವ ಸುರೇಶ್ ಕುಮಾರ್

Prasthutha: April 27, 2021

ಬೆಂಗಳೂರು : ಕಿಡಿಗೇಡಿಗಳು ಬೆಂಕಿಹಚ್ಚಿ ನಾಶಪಡಿಸಿದ್ದ ಮೈಸೂರಿನ ಕನ್ನಡ ಪುಸ್ತಕ ಪ್ರೇಮಿ ಸೈಯದ್ ಇಸಾಕ್ ಅವರ ಗ್ರಂಥಾಲಯಕ್ಕೆ ಸಾರ್ವಜನಿಕ ಗ್ರಂಥಾಲಯ ಇಲಾಖೆ ವತಿಯಿಂದ 8243 ಪುಸ್ತಕಗಳನ್ನು ದಾನ ರೂಪದಲ್ಲಿ ಒದಗಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ದುಷ್ಕರ್ಮಿಗಳ ಕೃತ್ಯಕ್ಕೆ ಗ್ರಂಥಾಲಯ ಬಲಿಯಾದ ಸುದ್ದಿ ತಿಳಿದ ತಕ್ಷಣವೇ ಸಾರ್ವಜನಿಕ ಗ್ರಂಥಾಲಯ ಇಲಾಖೆ ನಿರ್ದೇಶಕರಿಗೆ ಇಲಾಖೆಯಿಂದ ಪುಸ್ತಕಗಳನ್ನು ಒದಗಿಸಲು ಸೂಚಿಸಲಾಗಿತ್ತು. ಹಾಗೆಯೇ ಸೈಯದ್ ಇಸಾಕ್ ಅವರ ಗ್ರಂಥಾಲಯಕ್ಕೆ ನೆರವು ಒದಗಿಸುವಂತೆ ಕೋಲ್ಕತಾದ ರಾಜಾರಾಂ ಮೋಹನರಾಯ್ ಗ್ರಂಥಾಲಯ ಪ್ರತಿಷ್ಠಾನಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ.

ಸಯ್ಯದ್ ಇಸಾಕ್ ಅವರು ಕನ್ನಡದ ಮೇಲಿನ ಪ್ರೀತಿಯಿಂದಾಗಿ ಕಳೆದ ಹಲವು ವರ್ಷಗಳಿಂದ ಮೈಸೂರಿನ ರಾಜೀವ್‌ನಗರದಲ್ಲಿ ʻಕನ್ನಡ ಸಾರ್ವಜನಿಕ ಗ್ರಂಥಾಲಯʼ ನಡೆಸಿಕೊಂಡು ಬರುತ್ತಿದ್ದರು. ಅದನ್ನು ಸಹಿಸದವರು ಗ್ರಂಥಾಲಯಕ್ಕೆ ಬೆಂಕಿ ಇಟ್ಟು ಅಂದಾಜು 11 ಸಾವಿರ ಪುಸ್ತಕಗಳನ್ನು ನಾಶಪಡಿಸಿದ್ದರು.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!