ಸ್ವಪಕ್ಷೀಯರೇ 2000 ಕೋಟಿ ರೂ. ಕಿಕ್‌ ಬ್ಯಾಕ್‌ ಆರೋಪ ಮಾಡಿರುವಾಗ ತನಿಖೆ ಯಾಕಿಲ್ಲ?; ಎಚ್ ಡಿಕೆ ಪ್ರಶ್ನೆ

Prasthutha: June 19, 2021

ಮೇಕೆದಾಟು ಯೋಜನೆಯನ್ನು ಯಾವ ಕೋನದಲ್ಲಿ ನೋಡಿದರೂ ಅದು ನ್ಯಾಯವಾಗೇ ಕಾಣುತ್ತದೆ. ಹೀಗಾಗಿ ವಿವಾದ ಅನಗತ್ಯ. ಕಾವೇರಿಗಾಗಿ ಕಲಹ ನಡೆದದ್ದು ಸಾಕು. ಈಗ ನಾವು ಸೋದರತೆ ಮೆರೆಯಬೇಕಾದ ಅನಿವಾರ್ಯತೆ ಇದೆ ಎಂಬುದನ್ನು ಸೋದರ ಎಂಕೆ.ಸ್ಟಾಲಿನ್ ಅವರಿಗೆ ನಾನು ಮತ್ತೊಮ್ಮೆ ಹೇಳಲು ಬಯಸುತ್ತೇನೆ. ಅನಗತ್ಯ ಕಲಹದಲ್ಲಿ, ಅದೂ ಈ ಹೊತ್ತಲ್ಲಿ ನಾವು ಒಡೆದುಹೋಗಬಾರದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.


ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಹೊಗೇನಕಲ್‌ಕುಡಿಯುವ ನೀರಿನ ಯೋಜನೆ ವಿಚಾರದಲ್ಲಿ ತಮಿಳುನಾಡು ಯಾವ ರೀತಿ ನಡೆದುಕೊಂಡಿತು ಎಂದು ನಾನು ಹೇಳಬೇಕಿಲ್ಲ. ಆ ಯೋಜನೆ ಆಗಿದ್ದು ಎಂ.ಕೆ.ಸ್ಟಾಲಿನ್ ಉಪಮುಖ್ಯಮಂತ್ರಿ ಆಗಿದ್ದ ಕಾಲದಲ್ಲೇ. ಕುಡಿಯುವ ನೀರಿನ ನೆಪವೊಡ್ಡಿ ತಮಿಳುನಾಡು ಕರ್ನಾಟಕದ ಗಡಿ ದಾಟಿ ಬಂದಿತ್ತು. ಸಮರ್ಥನೆಯನ್ನೂ ಮಾಡಿಕೊಂಡಿತ್ತು. ಮೇಕೆದಾಟು ಕೂಡ ಕುಡಿಯುವ ನೀರಿನ ಯೋಜನೆಯೇ. ಮೇಕೆದಾಟು ಯೋಜನೆ ವಿಚಾರವಾಗಿ ಎನ್‌ಜಿಟಿ ದಕ್ಷಿಣ ಪೀಠ ಆರಂಭಿಸಿದ್ದ ಸ್ವಯಂ ಪ್ರೇರಿತ ವಿಚಾರಣೆಯನ್ನು ಪ್ರಧಾನ ಪೀಠ ಇತ್ಯರ್ಥಪಡಿಸಿದೆ. ಯೋಜನೆಗಿದ್ದ ಅಡ್ಡಿಯೊಂದು ನಿವಾರಣೆಯಾಗಿದೆ. ಈಗ ಕೇಂದ್ರದಿಂದ ಶೀಘ್ರವೇ ಅನುಮತಿ ಪಡೆದು ಯೋಜನೆ ಜಾರಿಗೊಳಿಸುವುದರತ್ತ ರಾಜ್ಯ ಸರ್ಕಾರ ಗಮನಹರಿಸಬೇಕು. ಕೇಂದ್ರವೂ ಪರಿಸರ ಅನುಮತಿಯನ್ನು ಶೀಘ್ರ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.


ಈ ಭ್ರಷ್ಟಾಚಾರದ ಆರೋಪದಲ್ಲಿ ಅನ್ಯರ ಹಸ್ತಕ್ಷೇಪದ ಆರೋಪವಿದೆ. ಆಡಳಿತದಲ್ಲಿ, ಅದೂ ಸರ್ಕಾರದ ಹಂತದಲ್ಲಿ ಮುಖ್ಯಮಂತ್ರಿಗಳ ಕುಟುಂಬಸ್ಥರು ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ಜನರ ಸೇವೆಯಲ್ಲಿ ತೊಡಗಿರುವ ಸರ್ಕಾರದಲ್ಲಿ ಸಂಬಂಧವೇ ಇಲ್ಲದವರ ಹಸ್ತಕ್ಷೇಪ ಸರಿಯಲ್ಲ. ಹೀಗಾಗಿ ಅನ್ಯರ ಹಸ್ತಕ್ಷೇಪದ ವಿಚಾರದಲ್ಲಿಯೂ ಗಂಭೀರ ತನಿಖೆ ನಡೆಯಬೇಕು. ರಾಕ್ಷಸ ಸರ್ಕಾರವೊಂದನ್ನು ಕೆಡವಿ ಅತ್ಯಂತ ಸಜ್ಜನ, ಸ್ವಚ್ಛ ಸರ್ಕಾರವನ್ನು ಪ್ರತಿಷ್ಠಾಪಿಸಿದವರೇ ಈ ಆರೋಪ ಮಾಡಿದ್ದಾರೆ. ಹೀಗಾಗಿ ಈ ಪ್ರಕರಣವನ್ನು ತನಿಖೆಗೆ ಒಳಪಡಿಸಬೇಕು. ಸಿಎಂ ಬಿ.ಎಸ್.ಯಡಿಯೂರಪ್ಪ 2006ರಲ್ಲಿ ನಾನು ಇಟ್ಟಂಥ ಹೆಜ್ಜೆಯನ್ನೇ ಇಟ್ಟು ತಾವು ಪ್ರಾಮಾಣಿಕ ಎಂಬುದನ್ನು ಸಾಬೀತು ಮಾಡಬೇಕು. ಹೀಗಾಗಿ ಕೂಡಲೇ ಆರೋಪವನ್ನು ತನಿಖೆಗೆ ಒಪ್ಪಿಸಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
2006ರಲ್ಲಿ ಸಿಎಂ ಆಗಿದ್ದ ನನ್ನ ವಿರುದ್ಧ ಬಿಜೆಪಿ ನಾಯಕರೇ 150ಕೋಟಿ ರೂ. ಗಣಿ ಲಂಚ ಆರೋಪ ಮಾಡಿದ್ದರು. ಸರ್ಕಾರದ ಪಾಲುದಾರ ಪಕ್ಷದವರೇ ದೂರಿದ್ದರಿಂದ ನಾನು ಅದನ್ನು ಲೋಕಾಯುಕ್ತಕ್ಕೆ ವಹಿಸಿ ಪಾರದರ್ಶಕತೆ ಕಾದುಕೊಂಡಿದ್ದೆ. ಈಗಿನ ಸರ್ಕಾರದ ವಿರುದ್ಧ ಸ್ವಪಕ್ಷೀಯರೇ 2000 ಕೋಟಿ ರೂ. ನೀರಾವರಿ ಕಿಕ್‌ಬ್ಯಾಕ್‌ಆರೋಪ ಮಾಡಿದ್ದಾರೆ.ಈಗ ತನಿಖೆ ಯಾಕಿಲ್ಲ? ಎಂದು ಎಚ್ ಡಿಕೆ ಪ್ರಶ್ನಿಸಿದ್ದಾರೆ.
ರಕ್ತಕ್ಕೆ ಅಂಟಿದ ಭಾಷೆ ಕಲಿಕೆಯನ್ನು ಒಂದು ವರ್ಷಕ್ಕೆ ಮಿತಿಗೊಳಿಸುವುದು ಅವೈಜ್ಞಾನಿಕ. ಈ ಬಗ್ಗೆ ಡಿಸಿಎಂ

ಡಾ.ಸಿ.ಎನ್.ಅಶ್ವತ್ಥನಾರಾಯಣ ಸ್ಪಷ್ಟನೆ ನೀಡಿದ್ದಾರೆ. ಈಗಿನ ವ್ಯವಸ್ಥೆಯಂತೆ 2 ವರ್ಷದ ಕನ್ನಡ ಕಲಿಕೆಗೆ ತೊಂದರೆ ಇಲ್ಲ ಎಂದು ಹೇಳಿರುವುದು ಸ್ವಲ್ಪ ಸಮಾಧಾನ ತಂದಿದೆ. ಅದರೆ, ಒಂದು ವರ್ಷಕ್ಕೆ ಮಿತಿಗೊಳಿಸುವ ಪ್ರಯತ್ನಗಳು ನಡೆದರೆ ಪರಿಣಾಮ ಕೆಟ್ಟದಾಗುತ್ತದೆ. ರಾಷ್ಟ್ರೀಯ ಶಿಕ್ಷಣ ನೀತಿ ಅನ್ವಯ ಆರಂಭವಾಗಲಿರುವ 4 ವರ್ಷಗಳ ಪದವಿಯಲ್ಲಿ ಕನ್ನಡ ಭಾಷಾ ಕಲಿಕೆಯನ್ನು 1 ವರ್ಷಕ್ಕೆ ಸೀಮಿತಗೊಳಿಸುವ ಉನ್ನತ ಶಿಕ್ಷಣ ಸಮಿತಿಯ ಪ್ರಸ್ತಾವ ನಿರಾಸೆ ತಂದಿದೆ. ಕನ್ನಡ ಭಾಷಾ ಕಲಿಕೆ ಅದೊಂದು ವಿಷಯ ಮಾತ್ರವಲ್ಲ, ಯುವ ಸಮುದಾಯದಲ್ಲಿ ಸಾಕ್ಷಿಪ್ರಜ್ಞೆ ಬಿತ್ತುವ,ಅವರನ್ನು ಸೂಕ್ಷ್ಮಮತಿಗಳನ್ನಾಗಿ ಮಾಡುವ ಯಶಸ್ವಿ ಪ್ರಯತ್ನ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!