October 2, 2020

ಹತ್ರಾಸ್ ಘಟನೆ | ಯುವ ಕಾಂಗ್ರೆಸ್ ಪ್ರತಿಭಟನೆ

ಮಂಗಳೂರು: ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ನಡೆದ ಯುವತಿಯ ಗ್ಯಾಂಗ್‌ರೇಪ್ ಮತ್ತು ಕೊಲೆ ಪ್ರಕರಣವನ್ನು ಖಂಡಿಸಿ ಮಿಥುನ್ ರೈ ನೇತೃತ್ವದಲ್ಲಿ ಯುವ ಕಾಂಗ್ರೆಸ್ ವತಿಯಿಂದ ಮೊಂಬತ್ತಿ ಪ್ರತಿಭಟನೆ ನಡೆಯಿತು.

ನಗರದ ಮಹಾನಗರ ಪಾಲಿಕೆ ಕಚೇರಿ ಮುಂಭಾಗದ ಗಾಂಧಿ ಪ್ರತಿಮೆ ಬಳಿ ನಡೆದ ಪ್ರತಿಭಟನೆಯಲ್ಲಿ ನೂರಾರು ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಯೋಗಿ ಸರಕಾರದ ವಿರುದ್ಧ ಘೋಷಣೆ ಗಳನ್ನು ಕೂಗಿದರು. ಮಾತ್ರವಲ್ಲ ಕೆಲ ಕಾಲ ರಸ್ತೆಯಲ್ಲಿ ಜಮಾಯಿಸಿ ರಸ್ತೆ ತಡೆಯನ್ನೂ ನಡೆಸಿದರು. ಬಳಿಕ ಯೋಗಿ ಆದಿತ್ಯನಾಥ್ ಪ್ರತಿಕೃತಿ ದಹನ ಮಾಡಲಾಯಿತು.

ಟಾಪ್ ಸುದ್ದಿಗಳು

ವಿಶೇಷ ವರದಿ