ಹಥ್ರಾಸ್ ಅತ್ಯಾಚಾರ ಪ್ರಕರಣ: ನಾಳೆ ಮಂಗಳೂರಿನಲ್ಲಿ ವಿಮ್ ಪ್ರತಿಭಟನೆ

Prasthutha|

ಮಂಗಳೂರು: ಉತ್ತರ ಪ್ರದೇಶದ ಹಥ್ರಾಸ್ ನಲ್ಲಿ ಸಾಮೂಹಿಕ ಅತ್ಯಾಚಾರವನ್ನು ವಿರೋಧಿಸಿ ವುಮೆನ್ಸ್ ಇಂಡಿಯಾ ಮೂವ್ ಮೆಂಟ್ (WIM) ನಾಳೆ ಮಂಗಳೂರಿನ ಮಿನಿ ವಿಧಾನಸೌಧದ ಮುಂಭಾಗದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ.

ಉತ್ತರ ಪ್ರದೇಶದಲ್ಲಿ ದಿನದಿಂದ ದಿನಕ್ಕೆ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿದ್ದು, ಯೋಗಿಯ ನಾಡಿನಲ್ಲಿ ಮಹಿಳೆಯರಿಗೆ ರಕ್ಷಣೆಯೇ ಇಲ್ಲದಂತಾಗಿದೆ. ಇದರ ವಿರುದ್ಧ  ವಿಮ್ ಅ.3ರಂದು ಮಧ್ಯಾಹ್ನ 3 ಗಂಟೆಗೆ ಮಿನಿ ವಿಧಾನಸೌಧದ ಮುಂದೆ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದು ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ವಿಮ್ ನ ಜಿಲ್ಲಾಧ್ಯಕ್ಷೆ ನಸ್ರಿಯಾ ಬೆಳ್ಳಾರೆ ತಿಳಿಸಿದ್ದಾರೆ.

- Advertisement -