ಹಥ್ರಾಸ್ ಪ್ರಕರಣ | ಅಲಹಾಬಾದ್ ಹೈಕೋರ್ಟ್ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

Prasthutha|

ನವದೆಹಲಿ : ಉತ್ತರ ಪ್ರದೇಶದ ಹಥ್ರಾಸ್ ದಲಿತ ಯುವತಿಯ ಭೀಕರ ಸಾಮೂಹಿಕ ಅತ್ಯಾಚಾರ ಮತ್ತು ಬರ್ಬರ ಕೊಲೆ ಪ್ರಕರಣದ ಸಿಬಿಐ ತನಿಖೆ ಅಲಹಾಬಾದ್ ಹೈಕೋರ್ಟ್ ಮೇಲ್ವಿಚಾರಣೆಯಲ್ಲಿ ನಡೆಯಲಿ ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ. ಪ್ರಕರಣದ ತನಿಖೆ ಮುಗಿದ ಬಳಿಕ, ಪ್ರಕರಣವನ್ನು ದೆಹಲಿಗೆ ವರ್ಗಾಯಿಸಲಾಗುವುದು ಎಂದು ಕೋರ್ಟ್ ತಿಳಿಸಿದೆ

ಪ್ರಕರಣದ ತನಿಖೆಯ ಸ್ಥಿತಿಗತಿಗಳ ಬಗ್ಗೆ ಅಲಹಾಬಾದ್ ಹೈಕೋರ್ಟ್ ಗೆ ವರದಿ ಸಲ್ಲಿಸುವಂತೆ ಕೋರ್ಟ್ ಸಿಬಿಐಗೆ ಸೂಚಿಸಿದೆ.

- Advertisement -

ಪ್ರಕರಣವನ್ನು ಉತ್ತರ ಪ್ರದೇಶದಿಂದ ಹೊರಗೆ ವರ್ಗಾಯಿಸಬೇಕು ಮತ್ತು ಕೋರ್ಟ್ ಮೇಲ್ವಿಚಾರಣೆಯಲ್ಲಿ ನಡೆಯಬೇಕು ಎಂದು ಕೋರಿದ್ದ ಪಿಐಎಲ್ ಗೆ ಸಂಬಂಧಿಸಿದ ತೀರ್ಪನ್ನು ಕೋರ್ಟ್ ಅ.15ರಂದು ಕಾದಿರಿಸಿತ್ತು.

ಸೆ.14ರಂದು ಹಥ್ರಾಸ್ ನಲ್ಲಿ 19 ವರ್ಷದ ದಲಿತ ಯುವತಿಯನ್ನು ಠಾಕೂರ್ ಸಮುದಾಯದ ನಾಲ್ವರು ಭೀಕರ ಅತ್ಯಾಚಾರ ನಡೆಸಿದ್ದರು. ಚಿಕಿತ್ಸೆ ಫಲಕಾರಿಯಾಗದೆ ದರ.29ರಂದು ಆಕೆ ಮೃತಪಟ್ಟಿದ್ದಳು.

- Advertisement -