ಹಥ್ರಾಸ್ ಲೈಂಗಿಕ ದೌರ್ಜನ್ಯ ಪ್ರಕರಣ | ಯುವತಿಯ ತಂದೆಯ ಹತ್ಯೆ

Prasthutha: March 2, 2021

ಹಥ್ರಾಸ್ : ಲೈಂಗಿಕ ದೌರ್ಜನ್ಯ ಪ್ರಕರಣವೊಂದರಲ್ಲಿ 2018 ರಿಂದ ಜೈಲು ವಾಸ ಅನುಭವಿಸುತ್ತಿದ್ದ ಆರೋಪಿ ಜಾಮೀನಿನ ಮೇಲೆ ಹೊರಬಂದು ಸಂತ್ರಸ್ತೆಯ ತಂದೆಯನ್ನು ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಹಥ್ರಾಸ್ ಜಿಲ್ಲೆಯಲ್ಲಿ ನಡೆದಿದೆ.

ಊರ ದೇವಸ್ಥಾನದ ಹೊರಗೆ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆಯ ಕುಟುಂಬ ಮತ್ತು ಆರೋಪಿಯ ಕುಟುಂಬದ ನಡುವೆ ಘರ್ಷಣೆ ನಡೆದು ಗುಂಡಿನ ಚಕಮಕಿಯಲ್ಲಿ ಸಂತ್ರಸ್ತೆಯ ತಂದೆ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ತನ್ನ ಮಗಳ ಮೇಲೆ ನಡೆದ ಲೈಂಗಿಕ ದೌರ್ಜನ್ಯದ ಬಗ್ಗೆ ಯುವತಿಯ ತಂದೆಯ ಹೇಳಿಕೆಯ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಆರೋಪಿ ಗೌರವ್ ಶರ್ಮಾ 2018ರಲ್ಲಿ ಬಂಧಿತನಾಗಿದ್ದ. ಆರೋಪಿ ಜಾಮೀನಿನ ಮೇಲೆ ಬಿಡುಗಡೆಯಾಗಿ ಬಂದಂದಿನಿಂದಲೂ ಎರಡೂ ಕುಟುಂಬಗಳು ಪರಸ್ಪರ ದ್ವೇಷಿಸುತ್ತಿದ್ದವು. ದೇವಸ್ಥಾನಕ್ಕೆ ತೆರಳಿದ್ದ ಎರಡೂ ಕುಟುಂಬಗಳ ಮಧ್ಯೆ ಮತ್ತೆ ಜಗಳವಾಗಿ ಗೌರವ್ ಶರ್ಮಾ ಸಂತ್ರಸ್ತೆಯ ತಂದೆಗೆ ಗುಂಡಿಟ್ಟು ಹತ್ಯೆ ಮಾಡಿದ್ದಾನೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!