ಹಾಸ್ಟೆಲ್ ವಿದ್ಯಾರ್ಥಿನಿಯರನ್ನು ವಿವಸ್ತ್ರಗೊಳಿಸಿ ನೃತ್ಯ ಮಾಡಿಸಿ ವೀಡಿಯೋ ವೈರಲ್ ಮಾಡಿದ ಪೊಲೀಸರು !

Prasthutha: March 3, 2021
ಗೃಹಸಚಿವರಿಂದ ತನಿಖೆಗೆ ನಾಲ್ವರ ಸಮಿತಿ ನೇಮಕ

ಮಹಾರಾಷ್ಟ್ರ: ಜಲ್ಗಾಂವ್ ಪ್ರದೇಶದ ಹಾಸ್ಟೆಲೊಂದರಲ್ಲಿ ಪೊಲೀಸರು ಕೆಲ ಯುವತಿಯರನ್ನು ಬಲವಂತವಾಗಿ ವಿವಸ್ತ್ರಗೊಳಿಸಿದ್ದಾರೆ ಮತ್ತು ನೃತ್ಯ ಮಾಡುವಂತೆ ಒತ್ತಾಯಿಸಿದ ವಿಲಕ್ಷಣ ಪ್ರಕರಣವೊಂದು ಬೆಳಕಿಗೆ ಬಂದಿದೆ.

ತನಿಖೆಯ ನೆಪದಲ್ಲಿ ಕೆಲ ಪೊಲೀಸರು ಹಾಸ್ಟೆಲ್‌ನೊಳಗೆ ಅಕ್ರಮವಾಗಿ ಪ್ರವೇಶಿಸಿದ್ದಾರೆ. ಈ ವೇಳೆ ಅವರು ಕೆಲವು ಹುಡುಗಿಯರಿಗೆ ವಸ್ತ್ರ ತೆಗೆದು ನೃತ್ಯ ಮಾಡುವಂತೆ ಒತ್ತಾಯಿಸಿದ್ದಾರೆ’ ಎಂದು ಜಲ್ಗಾಂವ್‌ ಹಾಸ್ಟೆಲ್‌ನ ಕೆಲ ವಿದ್ಯಾರ್ಥಿನಿಯರು ದೂರು ಸಲ್ಲಿಸಿದ್ದಾರೆ. ಮಾತ್ರವಲ್ಲದೆ ಆ ದೃಶ್ಯದ ವಿಡೀಯೋ ತುಣುಕುಗಳನ್ನು ಕೂಡಾ ವೈರಲ್ ಮಾಡಲಾಗಿದೆ.

ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಘಟನೆ ಬಗ್ಗೆ ಪ್ರತಿಕ್ರಿಯಿಸಿದ  ಮಹಾರಾಷ್ಟ್ರದ ಗೃಹಸಚಿವ ಅನಿಲ್ ದೇಶ್ ಮುಖ್ “ ಇದು ಬಹಳ ಬೇಸರದ ಸಂಗತಿ , ಈ ಬಗ್ಗೆ ತನಿಖೆ ನಡೆಸಲು ನಾಲ್ವರು ಸದಸ್ಯರ ಉನ್ನತ ಸಮಿತಿಯನ್ನು ರಚಿಸಲಾಗಿದೆ. ಎರಡು ದಿನದೊಳಗೆ ತನಿಖೆ ನಡೆಸಿ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದ್ದಾರೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!