ಹುಟ್ಟುಹಬ್ಬದಂದು ಬಂದೂಕಿನಿಂದ ಆಟವಾಡಿದ ಮೂರು ವರ್ಷದ ಮಗು ಗುಂಡು ತಗುಲಿ ಮೃತ್ಯು

Prasthutha: October 27, 2020

ಬಂದೂಕು ಹಿಡಿದು ಆಟವಾಡುತ್ತಿದ್ದಾಗ ಗುಂಡು ತಗುಲಿ ಮೂರು ವರ್ಷದ ಮಗು ಮೃತಪಟ್ಟಿದೆ. ಮಗುವಿನ ಹುಟ್ಟುಹಬ್ಬದ ಸಂತೋಷದ ನಡುವೆ ಗುಂಡಿನ ಶಬ್ದವನ್ನು ಕೇಳಿದ ಮನೆಯವರು ಹೋಗಿ ನೋಡಿದಾಗ ಎದೆಗೆ ಗುಂಡು ತಗುಲಿ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿದೆ ಎಂದು ಮಗುವಿನ ಸಂಬಂಧಿಕರು ತಿಳಿಸಿದ್ದಾರೆ. ಅಮೇರಿಕಾದ ಟೆಕ್ಸಾಸ್ ನಲ್ಲಿ ಈ ಘಟನೆ ನಡೆದಿದೆ.

ಸಂಬಂಧಿಕನ ಜೇಬಿನಿಂದ ಬಿದ್ದ ಬಂದೂಕಿನಿಂದ ಮಗು ಆಟವಾಡುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಈ ವರ್ಷ ಇಲ್ಲಿಯವರೆಗೆ ಇಂತಹಾ ಅಪಘಾತಗಳಲ್ಲಿ 229 ಮಕ್ಕಳಿಗೆ ಗುಂಡು ತಗುಲಿದೆ. 97 ಮಕ್ಕಳು ಪ್ರಾಣ ಕಳೆದುಕೊಂಡಿದ್ದಾರೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ