ಹೈದರಾಬಾದ್ | ರಾಸಾಯನಿಕ ಕಾರ್ಖಾನೆಯಲ್ಲಿ ಭಾರೀ ಸ್ಫೋಟ | ಹಲವರಿಗೆ ಗಾಯ

Prasthutha|

ಹೈದರಾಬಾದ್ ನ ಹೊರವಲಯದಲ್ಲಿರುವ ಬೊಲ್ಲಾರಮ್ ಕೈಗಾರಿಕಾ ಪ್ರದೇಶದ ರಾಸಾಯನಿಕ ಕಾರ್ಖಾನೆಯ ಆರ್ಗಾನಿಕ್ಸ್ ಘಟಕದಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಹಲವರು ಗಂಭೀರ ಗಾಯಗೊಂಡಿರುವುದಾಗಿ ವರದಿಯಾಗಿದೆ.

ದ್ರಾವಕವೊಂದನ್ನು ಕಾರ್ಖಾನೆಯಲ್ಲಿ ಇಟ್ಟಿದ್ದು, ಅದಕ್ಕೆ ಬೆಂಕಿ ತಗುಲಿ ಸ್ಫೋಟಗೊಂಡು ಇಡೀ ಕಾರ್ಖಾನೆಗೆ ಹತ್ತಿಕೊಂಡಿರಬಹುದೆಂದು ಅಂದಾಜಿಸಲಾಗಿದೆ.

- Advertisement -

ಕಾರ್ಖಾನೆಯಿಂದ ಹೆಚ್ಚಿನ ಮಟ್ಟದಲ್ಲಿ ಹೊಗೆಯಾಡುತ್ತಿದ್ದು, ಕುಕಟ್ ಪಲ್ಲಿ, ಪತಂಚೇರು, ಮತ್ತು ಮಿಯಾಪುರದ ಮೂರು ಅಗ್ನಿಶಾಮಕ ಟೆಂಡರ್ಗಳನ್ನು ಸ್ಥಳಕ್ಕೆ ರವಾನಿಸಲಾಗಿದೆ ಎಂದು ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯಲ್ಲಿ ಸುಮಾರು 10 ಕಾರ್ಮಿಕರು ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನಷ್ಟು ಕಾರ್ಮಿಕರು ಒಳಗೆ ಸಿಲುಕಿರುವ ಶಂಕೆ ವ್ಯಕ್ತಗೊಂಡಿದ್ದು, ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯನ್ನು ಮುಂದುವರೆಸಿದ್ದಾರೆ. 

- Advertisement -