ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಕುರಿತ ಅಮಿತ್ ಶಾ ಹೇಳಿಕೆ ಖಂಡಿಸಿ, ದಲಿತ ಸಂಘಟನೆಗಳು ಕರೆ ನೀಡಿದ್ದ ಬಂದ್ ಗೆ ಹುಬ್ಬಳ್ಳಿಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಬೆಳಿಗ್ಗೆಯಿಂದಲೇ ಸಾರ್ವಜನಿಕರಿಗೆ ಬಂದ್ ಬಿಸಿ ತಟ್ಟಿದ್ದು, ವಾಣಿಜ್ಯ ನಗರಿಯಲ್ಲಿ ಅಂಗಡಿ ಮುಗ್ಗಟ್ಟುಗಳು ಸಂಪೂರ್ಣವಾಗಿ ಬಂದ್ ಆಗಿವೆ.
ಬಂದ್ ಗೆ ಕಾಂಗ್ರೆಸ್ ಪಕ್ಷ ಸೇರಿದಂತೆ 10ಕ್ಕೂ ಅಧಿಕ ಸಂಘಟನೆಗಳು ಬೆಂಬಲ ಸೂಚಿಸಿದ್ದರಿಂದ ನಗರದಲ್ಲಿ ಪೂರಕ ಸ್ಪಂದನ ವ್ಯಕ್ತವಾಗಿದೆ.
ಈ ಹುಬ್ಬಳ್ಳಿಯ ಚೆನ್ನಮ್ಮ ವೃತ್ತದಲ್ಲಿ ಅಂಬೇಡ್ಕರ್ ಪೋಟೋ ಹಿಡಿದು ಪ್ರತಿಭಟನೆ ನಡೆಸಿ, ಕೇಂದ್ರ ಸಚಿವ ಅಮಿತ್ ಶಾ ಹೇಳಿಕೆಯನ್ನು ಖಂಡಿಸಿದರು. ಧಾರವಾಡ ಜುಬಿಲಿ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಅಮಿತ್ ಶಾ ವಿರುದ್ಧ ಘೋಷಣೆ ಕೂಗಿದರು. ಜೈ ಭೀಮ್ ಘೋಷಣೆ ಕೂಗಿದರು.
ಬಂದ್ ಕರೆಯ ಹಿನ್ನೆಲೆಯಲ್ಲಿ ಇಂದು ಅವಳಿ ನಗರದ ಶಾಲಾ ಕಾಲೇಜುಗಳಿಗೆ ಜಿಲ್ಲಾಡಳಿತವು ಮೊದಲೇ ರಜೆ ಘೋಷಿಸಿದೆ. ಆದರೆ ಇಂದು ಬೆಳಗ್ಗೆ ನಗರದಲ್ಲಿ ಬಸ್ ಗಳ ಓಡಾಟ ಸ್ಥಗಿತಗೊಂಡಿದ್ದರಿಂದ ಪ್ರಯಾಣಿಕರ ಪರದಾಡುವಂತಾಗಿತ್ತು.