ಅಮಿತ್ ಶಾ ಭಾಷಣ ತಿರುಚಿ ಕಾಂಗ್ರೆಸ್ ಅಪಪ್ರಚಾರ: ಬಿಎಲ್ ಸಂತೋಷ್ ಎಂದಿಗೂ ಅಧಿಕಾರಕ್ಕೆ ಆಸೆಪಟ್ಟವರಲ್ಲ; ಎಚ್.ಡಿ ದೇವೇಗೌಡ

Prasthutha|

- Advertisement -

ಬೆಂಗಳೂರು: ಸಂಸತ್ ಅಧಿವೇಶನದಲ್ಲಿ ನಾನು ಅಮಿತ್ ಶಾ ಅವರ ಭಾಷಣ ಕೇಳಿದ್ದೇನೆ. ಕೇಂದ್ರ ಗೃಹ ಸಚಿವರ ಭಾಷಣ ತಿರುಚಿ ಅಪಪ್ರಚಾರ ಮಾಡುತ್ತಿದ್ದಾರೆಂದು ಕಾಂಗ್ರೆಸ್ ವಿರುದ್ಧ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ವಾಗ್ದಾಳಿ ನಡೆಸಿದ್ದಾರೆ.

ನಾಡಪ್ರಭು ಕೆಂಪೇಗೌಡ ಜನಪರ ವೇದಿಕೆ ವತಿಯಿಂದ ಅಟಲ್ ಬಿಹಾರಿ ವಾಜಪೇಯಿ ಜನ್ಮ ಶತಮಾನೋತ್ಸವ ಹಿನ್ನೆಲೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಹೆಚ್‌ಡಿಡಿ ಪಾಲ್ಗೋಂಡು ಮಾತನಾಡಿದ ಅವರು, ಪ್ರಜಾಪ್ರಭುತ್ವದ ಹೆಸರಲ್ಲಿ ಕಾಂಗ್ರೆಸ್ ಹೇಗೆ ನಡೆದುಕೊಳ್ಳುತ್ತಿದೆ ಎಂದರೆ ದೇಶದ ಜನರು ತಲೆ ತಗ್ಗಿಸಬೇಕು ಹಾಗೆ ಮಾಡ್ತಾರೆ. ಅಧಿವೇಶನದಲ್ಲಿ ನಾನು ಅಮಿತ್ ಶಾ ಭಾಷಣ ಕೇಳಿದ್ದೇನೆ. ಗೃಹ ಸಚಿವ ಅಮಿತ್ ಶಾ ಭಾಷಣ ತಿರುಚಿ ಅಪಪ್ರಚಾರ ಮಾಡ್ತಿದ್ದಾರೆ ಎಂದು ಗರಂ ಆದರು.

- Advertisement -

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಮಾತುಗಳನ್ನು ಮೆಚ್ಚಿಕೊಂಡ ದೇವೇಗೌಡ, ಸಂತೋಷ್ ಅವರು ಯಾವುದೇ ಅಧಿಕಾರಕ್ಕೆ ಆಸೆಪಟ್ಟವರಲ್ಲ. ಕೇಂದ್ರ, ರಾಜ್ಯದಲ್ಲಿ ಮಂತ್ರಿ ಆಗಬೇಕು ಎಂದು ಆಸೆಪಟ್ಟವರಲ್ಲ. ನಿಸ್ವಾರ್ಥದಿಂದ ಪಕ್ಷ ಕಟ್ಟುತ್ತಿದ್ದಾರೆ ಎಂದರು.

ಮೊದಲ ಬಾರಿಗೆ ನಿಮ್ಮ ಭಾಷಣ ಕೇಳಿದ್ದೇನೆ. ಪ್ರಜಾಪ್ರಭುತ್ವದ ಬಗ್ಗೆ, ಮೋದಿ, ಶಾ ಅವರ ಬಗ್ಗೆ ಎದುರಾಳಿಗಳು ಮಾತನಾಡುತ್ತಾರೆ. ಅವರ ಮಾತು ಪೊಳ್ಳು. ಅದಕ್ಕೆ ಬೆಲೆ ಇಲ್ಲ ಎನ್ನುವುದನ್ನು ಜನರ ಮನ ಮುಟ್ಟುವಂತೆ ಮಾತಾಡಿದ್ದೀರಿ. ಮೊದಲ ಬಾರಿಗೆ ನಿಮ್ಮ ಜೊತೆ ನಾನು ವೇದಿಕೆ ಹಂಚಿಕೊಂಡಿದ್ದೇನೆ. ನಿಮ್ಮಲ್ಲಿ ಏನು ಶಕ್ತಿ ಇದೆ ಎಂದು ಅರ್ಥ ಮಾಡಿಕೊಂಡಿದ್ದೇನೆ ಎಂದು ಹೇಳಿದರು.



Join Whatsapp