ಅಮೇಥಿ: ಕಾಂಗ್ರೆಸ್ ಅಭ್ಯರ್ಥಿ ಘೋಷಣೆಯಾಗದಿದ್ದರೂ ಎಲ್ಲೆಲ್ಲೂ ರಾಬರ್ಟ್ ವಾದ್ರಾ ಪೋಸ್ಟರ್

Prasthutha|

ಅಮೇಥಿಯಲ್ಲಿ ಮೇ 20ರಂದು ಮತದಾನ ನಡೆಯಲಿದ್ದು, ಕಾಂಗ್ರೆಸ್ ಇನ್ನೂ ಅಭ್ಯರ್ಥಿಯನ್ನು ಘೋಷಣೆ ಮಾಡದೆ ಕುತೂಹಲ ಮುಂದುವರೆಸಿದೆ.

- Advertisement -


ಆದರೆ ಈಗಾಗಲೇ ಅಮೇಥಿಯಲ್ಲಿ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾ ಅವರ ಪೋಸ್ಟರ್ ಎಲ್ಲೆಡೆ ರಾರಾಜಿಸುತ್ತಿವೆ. ಅದರಲ್ಲಿ ಈ ಬಾರಿ ರಾಬರ್ಟ್ ವಾದ್ರಾ ಎನ್ನುವ ಅರ್ಥವನ್ನು ಕೊಡುವ ವಾಖ್ಯವನ್ನು ಬರೆಯಲಾಗಿದೆ.


ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನದಲ್ಲಿ ಮೇ 20 ರಂದು ಅಮೇಥಿ ಮತದಾನ ನಡೆಯಲಿದ್ದು, ಮೇ 3 ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಬಿಜೆಪಿ ಹಾಲಿ ಸಂಸದೆ ಮತ್ತು ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರನ್ನು ತನ್ನ ಅಭ್ಯರ್ಥಿ ಎಂದು ಘೋಷಿಸಿದ್ದರೂ, ಕಾಂಗ್ರೆಸ್ ತನ್ನ ಆಯ್ಕೆಯನ್ನು ಇನ್ನೂ ಹೆಸರಿಸಿಲ್ಲ.

Join Whatsapp